Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಉಡುಪಿಯ ನಿಟ್ಟೂರು ಬಳಿ ಭೀಕರ ರಸ್ತೆ ಅಪಘಾತ

ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಇನ್ನೋವಾ ಕಾರು ನಡುವೆ ಭೀಕರ ಅಪಘಾತ ಸಂಂಭವಿಸಿದ್ದು, ಬೈಕ್‌ನಲ್ಲಿದ್ದ ಸವಾರರು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.


ನಿಟ್ಟೂರು ಹೆದ್ದಾರಿಯಿಂದ ಕೊಡಂಕ್ಕೂರು ಕಡೆಗೆ ಸಾಗುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿಯಾಗಿದೆ. ಬೈಕ್ ಸವಾರರನ್ನು ತಪ್ಪಿಸಲು ಕಾರಿನ ಚಾಲಕ ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲ. ಬೈಕ್‌ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಗೂಡ್ಸ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೈಕ್‌ನ ಸವಾರರು ಗಂಭೀರ ಗಾಯಗಳೊಂದಿಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಬಗ್ಗೆ ಉಡುಪಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Reply