Header Ads
Header Ads
Breaking News

ಉಡುಪಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಿ : ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಆಗ್ರಹ

 ಜಿಲ್ಲೆಯಲ್ಲಿ 5 ಜನ ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರಿದ್ದು ಸಚಿವ ಸಂಪುಟದಲ್ಲಿ ಜಿಲ್ಲೆಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಆಗ್ರಹಿಸಿದರು.

ಅವರು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು ಅದರಲ್ಲು ಮರಳಿನ ಸಮಸ್ಯೆ ಕಳೆದ 5,6 ವರ್ಷಗಳಿಂದ ಆರ್ಥಿಕ ವ್ಯವಸ್ಥೆಗೆ ಸಾಕಷ್ಟು ಹಾನಿಯನ್ನು ಉಂಟುಮಾಡಿದೆ. ಅಷ್ಟೆ ಅಲ್ಲದೆ ರಾಷ್ಟ್ರೀಯ ಹೆದ್ದಾರಿ ಸಮಸ್ಯೆ, ನೀರಿನ ಸಮಸ್ಯೆ ಕೂಡಾ ತಲೆದೂರುತ್ತಿದ್ದೆ ಇದಕ್ಕೆಲ್ಲ ಪರಿಹಾರಾರ್ಥವಾಗಿ ಸಕಾಲದಲ್ಲಿ ಸೂಕ್ತಕ್ರಮ ಕೈಗೊಳ್ಳಲು ಜಿಲ್ಲೆಯಲ್ಲಿ ಒಬ್ಬರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದರು.
ಅಷ್ಟೆ ಅಲ್ಲದೆ ಜಿಲ್ಲೆಯಲ್ಲಿ ಸಂಘಟನಾ ಪರ್ವದ ಅಂಗವಾಗಿ ಸದಸ್ಯತ್ವದ ಅಭಿಯಾನ ಆರಂಭವಾಗಿದೆ. ಈಗಾಗಲೆ ಜಿಲ್ಲೆಯಲ್ಲಿ 7೦೦೦೦ ಸದಸ್ಯರ ನೊಂದಣಿಯಾಗಿದ್ದು ಎರಡು ಲಕ್ಷ ಸದಸ್ಯರ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸುರೇಶ್ ನಾಯಕ್ ಕುಯಿಲಾಡಿ,ಸಂಧ್ಯಾ ರಮೇಶ್,ಯಶ್ ಪಾಲ್ ಸುವರ್ಣ ಮತ್ತಿತರ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *