Header Ads
Breaking News

ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಯೋಜನೆಯಲ್ಲಿ ಶಿಕ್ಷಕರ ವಿವಿಧ ಬೇಡಿಕೆಗಳನ್ನೂ ಈಡೇರಿಸುವಂತೆ ಒತ್ತಾಯಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವಿವಿಧ ಬೇಡಿಕೆ ಇಡೇರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಶಿಕ್ಷಕರು ಭಾಗವಹಿಸಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸಲು ಶಿಕ್ಷಕರು ತರಗತಿಯನ್ನು ಬಹಿಷ್ಕರಿಸಿ ಶಾಲೆಯನ್ನು ಮುಚ್ಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಭಾಸ್ಕರ್ ಪೂಜಾರಿ ಮಾತನಾಡಿ ಶಾಲೆಯನ್ನು ಮುಚ್ಚಿ ಪ್ರತಿಭಟನೆಯನ್ನು ಮಾಡಲು ತುಂಬಾ ಬೇಸರವಾಗುತ್ತಿದೆ ಆದರೆ ಅನಿವಾರ್ಯ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡಲೇಬೇಕಾಗಿದೆ ನಮ್ಮ ಬೇಡಿಕೆಗಳನ್ನು ಸರಕಾರ ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *