Header Ads
Header Ads
Header Ads
Breaking News

ಉಳ್ಳಾಲದ ಜುಬೈರ್ ಕೊಲೆ ಪ್ರಕರಣ:  5 ಮಂದಿಯ ಬಂಧನ

ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ನಡೆದ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹೈಲ್, ನಿಝಾಮುದ್ದೀನ್, ಮುಹಮ್ಮದ್ ಮುಸ್ತಫ, ತಾಜುದ್ದೀನ್ ಹಾಗು ಆಸಿಫ್ ಬಂಧಿತ ಆರೋಪಿಗಳಾಗಿದ್ದಾರೆ. ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಮುಂಭಾಗ ತಲವಾರುಗಳಿಂದ ದಾಳಿ ನಡೆಸಿ ಝುಬೈರ್ ರನ್ನು ಹತ್ಯೆಗೈಯಲಾಗಿತ್ತು. ಘಟನೆಯಲ್ಲಿ ಝುಬೈರ್ ಜೊತೆಗಿದ್ದ ಇಲ್ಯಾಸ್ ಅವರ ಕೈಗಳಿಗೆ ಗಾಯಗಳಾಗಿವೆ. ಪ್ರಕರಣಕ್ಕೆ ಸಂಬಂಧಿಸಿ ಝುಬೈರ್ ಸಹೋದರ ಆಸಿಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಧಿತರಲ್ಲಿ ಐವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಇವರಲ್ಲಿ ನಾಲ್ಕು ಮಂದಿ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದಾರೆ. 2016ರಲ್ಲಿ ನಡೆದ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ. ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದರು.ಇದೀಗ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ನಾಲ್ವರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದರೆ, ಇನ್ನೋರ್ವ ಹತ್ಯೆಗೆ ಸಹಕಾರ ನೀಡಿದ್ದಾನೆ ಎಂದವರು ಹೇಳಿದರು.

Related posts

Leave a Reply