Header Ads
Breaking News

ಎನ್‌ಡಿಎ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ: ಪ್ರಮೋದ್ ಮಧ್ವರಾಜ್

ಕುಂದಾಪುರ: ಎನ್‍ಡಿಎ ಸರ್ಕಾರದ ಅವಧಿಯಲ್ಲಿ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿದೆ. ರಾಜ್ಯದ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೃತ ಮೀನುಗಾರರಿಗೆ ನೀಡುವ ಪರಿಹಾರ ಮೊತ್ತವನ್ನು 6 ಲಕ್ಷಕ್ಕೆ ಏರಿಸುವುದು ಸೇರಿದಂತೆ ಮೀನುಗಾರರಿಗಾಗಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದರು.

ಕುಂದಾಪುರದ ನೆಹರೂ ಮೈದಾನದಲ್ಲಿ ಬುಧವಾರ ಸಂಜೆ ಕಾಂಗ್ರೆಸ್ ಹಾಗೂ ಜೆಡಿಎಸ್‍ಮೈತ್ರಿ ಅಭ್ಯರ್ಥಿಗಳ ಪರವಾಗಿ ನಡೆದ ಮಹಿಳಾ ಮೀನುಗಾರರ ಸಮಾವೇಶದಲ್ಲಿ ಅವರು ಮಾತನಾಡಿದರು.

ಈತ್ತೀಚೆಗೆ ಕಾಣೆಯಾದ 7 ಮಂದಿ ಮೀನುಗಾರರ ಪತ್ತೆಯ ವಿಚಾರವೂ ಸೇರಿ, ಮೀನುಗಾರರ ಸಂಕಷ್ಟಗಳಿಗೆ ಕೇಂದ್ರದ ಮೋದಿ ಸರ್ಕಾರದಿಂದ ಯಾವುದೆ ರೀತಿಯ ಸ್ಪಂದನೆಗಳು ದೊರಕುತ್ತಿಲ್ಲ. ದೇಶದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಒಂದು ಹೊಸ ಮೈತ್ರಿ ಇತಿಹಾಸವನ್ನು ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷದ ವ್ಯಕ್ತಿ, ಜೆಡಿಎಸ್ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುತ್ತಿದ್ದಾರೆ. ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲೆಂದೆ ದೇವರು ನನ್ನನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಾನೆ. ನಿಮ್ಮ ಸೇವೆ ಮಾಡಬೇಕೆಂಬ ಉತ್ಸಾಹದಲ್ಲಿದ್ದೇನೆ. ನಾನು ಅತಿಥಿ ಕಲಾವಿದನಾಗಲ್ಲ. ಕ್ಷೇತ್ರದಲ್ಲಿದ್ದುಕೊಂಡೇ 365ದಿನವೂ ಹಗಲಿರುಳು ನಿಮ್ಮ ಸೇವೆ ಮಾಡುತ್ತೇನೆ ಎಂದರು.

Related posts

Leave a Reply

Your email address will not be published. Required fields are marked *