Header Ads
Breaking News

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳದ್ದೇ ಮೇಲುಗೈ!

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2019ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಘೋಷಣೆ ಮಾಡಿದೆ. ಶಾಲೆಗಳಲ್ಲಿ ಮೇ 1ರಂದು ಫಲಿತಾಂಶ ಲಭ್ಯವಾಗಲಿದೆ.

ಮಂಗಳವಾರ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾ ಶಂಕರ್, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು.
2019ನೇ ಸಾಲಿನಲ್ಲಿ 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮಾರ್ಚ್ 22 ರಿಂದ ಏಪ್ರಿಲ್ 4ರ ತನಕ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆದಿತ್ತು. ‘ಮೌಲ್ಯ ಮಾಪನ ಆದ ನಂತರ ಕೇಂದ್ರದಿಂದಲೇ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿದ್ದೇವೆ. ಆದ್ದರಿಂದ, ಇಷ್ಟು ಬೇಗ ಫಲಿತಾಂಶವನ್ನು ನೀಡಲು ಸಾಧ್ಯವಾಯಿತು’ ಎಂದು ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಉಮಾ ಶಂಕರ್ ಹೇಳಿದರು.

2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.

Related posts

Leave a Reply

Your email address will not be published. Required fields are marked *