Header Ads
Header Ads
Breaking News

ಏಷ್ಯನ್ ಗೇಮ್ಸ್‌ನ ವಿಜೇತೆ ಪೂವಮ್ಮಗೆ ಸನ್ಮಾನ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ. ಸನ್ಮಾನ ಮಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ. ರಿಲೇಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದಿದ್ದ ಪೂವಮ್ಮ.

 

ಒಟ್ಟು40 ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಎತ್ತಿ ಹಿಡಿದ ರಾಜ್ಯದ ಪ್ರತಿಭೆ, ಒಲಿಂಪಿಯನ್ ಪೂವಮ್ಮರನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಲಕ್ಷ ರೂ. ಚೆಕ್ ನೀಡಿ ಪೂವಮ್ಮಗೆ ಗೌರವಜಿಲ್ಲಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಆಯೋಜಿಸಲಾದ ಸಭೆಯ ಆರಂಭದಲ್ಲೇ ಸಾಧಕಿ ಪೂವಮ್ಮ ಚಿನ್ನದ ಪದಕ ಪಡೆದಿದ್ದಕ್ಕೆ 25ಲಕ್ಷ ಹಾಗೂ ಬೆಳ್ಳಿ ಪದಕ ಪಡೆದಿದ್ದಕ್ಕೆ15ಲಕ್ಷ ಸೇರಿ ಒಟ್ಟು 40ಲಕ್ಷ ರೂಪಾಯಿಗಳ ಚೆಕ್ ಜೊತೆಗೆ ನಿವೇಶನದ ಭರವಸೆ ನೀಡಿದರು. ಈ ಮೂಲಕ ಸಿಎಂ ಕುಮಾರಸ್ವಾಮಿ, ಪೂವಮ್ಮಗೆ ಹೃದಯಸ್ಪರ್ಶಿ ಅಭಿನಂದನೆಯನ್ನು ಕ್ರೀಡಾ ಸಾಧಕಿಗೆ ಸಲ್ಲಿಸಿದರು. ಮುಖ್ಯಮಂತ್ರಿಗಳು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ವೇಳೆ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರೀಡಾಳುವಿಗೆ ಗೌರವ ನೀಡುವ ಬಗ್ಗೆ ನಿರ್ಧರಿಸಲಾಯಿತು. ಈ ಅಭಿನಂದನೆ ರಾಜ್ಯದ ಸಾಧಕರಿಗೆ ಸ್ಪೂರ್ತಿಯಾಗಲಿ ಎಂದ ಮುಖ್ಯಮಂತ್ರಿಗಳು, ಕ್ರೀಡಾ ಸಾಧಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂವಮ್ಮ, ಇಷ್ಟು ತುರ್ತು ಸಮಯದಲ್ಲಿ ತನ್ನ ಸಾಧನೆಗೆ ನೀಡಿದ ಗೌರವಕ್ಕೆ ತಾನು ಅನಂತಾನಂತ ಧನ್ಯವಾದಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಜಯಮಾಲಾ ಶುಭಹಾರೈಸಿದರು. ಸಂಸದ ನಳಿನ್ ಕುಮಾರ್ ಕಟೀಲ್. ಎಂಎಲ್‌ಸಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.

Related posts

Leave a Reply