Header Ads
Header Ads
Breaking News

ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟ ವಿಚಾರ : ಉಡುಪಿಯಲ್ಲಿ ಮಸೀದಿ, ಮಠಕ್ಕೆ ವಿಶೇಷ ಭದ್ರತೆ

 ಅಯೋದ್ಯೆಯ ಕುರಿತು ಐತಿಹಾಸಿಕ ತೀರ್ಪು ಪ್ರಕಟಗೊಂಡ ಹಿನ್ನಲೆಯಲ್ಲಿ ಉಡುಪಿಯಲ್ಲಿ ಪ್ರಮುಖ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ನಿನ್ನೆಯೇ ಶಾಲಾ, ಕಾಲೇಜುಗಳಿಗೆ ರಜೆಯನ್ನ ಘೋಷಿಸಿದ್ದರು. ಇಂದು ಬಸ್ ನಿಲ್ಧಾಣ ಕೃಷ್ಣ ಮಠ, ಮಸೀದಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ 4ಕೆಎಸ್‌ಆರ್‌ಪಿ ಹಾಗೂ 3 ಡಿಎಆರ್ ತುಕಡಿ ನಿಯೋಜಿಸಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 350ಕ್ಕೂ ಅಧಿಕ ಪೊಲೀಸರು ಬಂದೋಬಸ್ತ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. 

Related posts

Leave a Reply

Your email address will not be published. Required fields are marked *