Header Ads
Breaking News

ಕಂಟೈನರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ : ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭೀಕರ ಅಪಘಾತ ನಡೆದಿದ್ದು, ಕಾರೊಂದು ನಿಂತಿದ್ದ ಕಂಟೈನರ್‍ಗೆ ಢಿಕ್ಕಿಯಾದ ಕಾರಣ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಯುವಕರೆಲ್ಲಾ ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಇವರೆಲ್ಲಾ 25 ರಿಂದ 30 ರ ವಯೋಮಾನದವರಾಗಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದರು. ಮೃತರನ್ನು ಅಭಿಷೇಕ್, ಮಂಜುನಾಥ್, ವಿಕ್ರಂ, ಚೇತನ್ ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸ್ರು ಸ್ಥಳಕ್ಕೆ ತೆರಳಿ ಶವಗಳ ಮರಣೋತ್ತರ ಪರೀಕ್ಷೆಗಾಗಿ ಚನ್ನರಾಯಪಟ್ಟಣಕ್ಕೆ ತಂದಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು ಘಟನೆಯ ಕುರಿತಾಗಿ ಪೊಲೀಸ್ ಇಲಾಖೆಯಿಂದ ವಿವರಣೆ ಪಡೆದು ಸಂಬಂಧಪಟ್ಟ ನಡೆದ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

Related posts

Leave a Reply

Your email address will not be published. Required fields are marked *