Header Ads
Header Ads
Breaking News

ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಸರಕಾರ ಸುತ್ತೋಲೆ ಹೊರಡಿಸಿಲ್ಲ : ಉಡುಪಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಉಡುಪಿಯಲ್ಲಿ ಕನ್ನಡ ಧ್ವಜ ಹಾರಿಸಿಲ್ಲ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಇವತ್ತೇ ಸೂಚನೆ ಕೊಟ್ಟಿದ್ದೇನೆ. ಮುಂದಿನ ವರ್ಷ ಎರಡೂ ಬಾವುಟ ಹಾರಿಸಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಯಾವುದೇ ಸುತ್ತೋಲೆ ಸ್ವೀಕರಿಸಿಲ್ಲ. ಮುಂದಿನ ವರ್ಷ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸ್ತೇವೆ ಎಂದರು. ರಾಜ್ಯೋತ್ಸವ ಪ್ರಶಸ್ತಿ ಸಾಧಕರಿಗೆ ಕೊಡಲಾಗಿದೆ. ಪ್ರಶಸ್ತಿ ವಿಚಾರದಲ್ಲಿ ರಾಜಕೀಯ ಬೆರೆಸಿಲ್ಲ. ರಾಜಕಾರಣಿಗಳಿಗೆ ರಾಜ್ಯೋತ್ಸವ ಕೊಟ್ಟಿಲ್ಲ ಎಂದು ತಿಳಿಸಿದರು. ಶಾಲಾ ಪಠ್ಯದಿಂದ ಟಿಪ್ಪು ಪಾಠ ರದ್ಧತಿ ಪ್ರಸ್ತಾವದ ಬಗ್ಗೆ ಮಾತನಾಡಿದ ಅವರು ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ವಿವಾದಾದ್ಮಕ ವಿಚಾರ ಮಕ್ಕಳಿಗೆ ತಿಳಿಸಬಾರದೆಂಬೂದು ಸರಕಾರದ ಉದ್ದೇಶ. ಟಿಪ್ಪು ವಿಚಾರಗಳು ಹಿಂದೆ ಪ್ರಚಲಿತದಲ್ಲಿ ಇರಲಿಲ್ಲ. ಸಿಎಂ ಈ ಬಗ್ಗೆ ಪರಿಶೀಲನೆ ಮಾಡಬೇಕೆಂದು ಹೇಳಿದ್ದಾರೆ. ಸರಕಾರ ಈ ವರೆಗೆ ಯಾವುದೇ ನಿರ್ಣಯ ಮಾಡಿಲ್ಲ ಎಂದರು. ಹಣಕಾಸು ವಿನಿಮಯಗಳೆಲ್ಲಾ ಆನ್ ಲೈನ್ ಮುಖಾಂತರ ನಡೆಯುತ್ತಿದೆ. ದೇಶದಲ್ಲೇ ಸೈಬರ್ ಕ್ರೈಂ ಹೆಚ್ಚಾಗಿದೆ. ಕರ್ನಾಟಕ ಐಟಿಯಲ್ಲಿ ಬಹಳ ಮುಂದೆ ಇದೆ. ಇಲ್ಲಿ ಡಿಜಿಟಲೈಸೇಶನ್ ಮಿಸ್ ಯೂಸ್ ಆಗುತ್ತಿದೆ ಎಂದು ಉಡುಪಿಯಲ್ಲಿ ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದರು.

 

Related posts

Leave a Reply

Your email address will not be published. Required fields are marked *