Header Ads
Header Ads
Breaking News

ಕರಾವಳಿಯಲ್ಲಿ ಮತ್ತೆ ಚುರುಕುಗೊಂಡ ಮಳೆ : ಕೇಂದ್ರ ರೈಲುನಿಲ್ದಾಣದಲ್ಲಿ ನುಗ್ಗಿದ ಮಳೆ ನೀರು

 ಮಂಗಳೂರಲ್ಲಿ ಮತ್ತೆ ಮಳೆ ಬಿರುಸುಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇನ್ನಿತರ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಈ ನಡುವೆ ಮಂಗಳೂರಿನ ಕೆಲವೆಡೆ ಕೃತಕ ನೆರೆ ಪರಿಸ್ಥಿತಿ ಉದ್ಭವವಾಗಿದೆ. ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ.

ಇನ್ನು ಮಂಗಳೂರು ಕೇಂದ್ರ ರೈಲು ನಿಲ್ದಾಣದೊಳಗೆ ಮಳೆ ನೀರು ನುಗ್ಗಿದೆ. ಟಿಕೆಟ್ ಕೌಂಟರ್ ಹೊರಗಡೆ ನೀರು ನಿಂತಿದ್ದು, ಈ ನಡುವೆ ನಗರದ ಎಂಪೈರ್ ಮಾಲ್, ಗುಜರಾತಿ ಶಾಲೆ ಬಳಿ ಕೃತಕ ನೆರೆ ಸೃಷ್ಟಿಯಾಗಿತ್ತು. ಕರಾವಳಿಯಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ.

Related posts

Leave a Reply

Your email address will not be published. Required fields are marked *