Header Ads
Header Ads
Header Ads
Header Ads
Header Ads
Header Ads
Breaking News

ಕರಾವಳಿಯಲ್ಲಿ ಸಿಎಂ ಯಡಿಯೂರಪ್ಪ : ನೆರೆ ಪರಿಸ್ಥಿತಿ ಅವಲೋಕನ

ರಾಜ್ಯಾದ್ಯಂತ ನೆರೆಪೀಡಿತ ಪ್ರದೇಶಗಳ ಪ್ರವಾಸ ಕೈಗೊಂಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪನವರು ಇಂದು ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಅವಲೋಕನಕ್ಕಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಯಡಿಯೂರಪ್ಪರವರು ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಬಿಎಸ್‌ವೈ, ದ.ಕ. ಜಿಲ್ಲೆಯಲ್ಲಿ5 ತಾಲೂಕುಗಳಿಗೆ ಮಳೆಯಿಂದ ತೊಂದರೆಯಾಗಿದೆ. ಸಂತ್ರಸ್ತರಿಗಾಗಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 750 ಮಂದಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ತೊಂದರೆಗೊಳಗಾದವರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದರು. ಈ ಸಂದರ್ಭ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಸಂಜೀವ ಮಠಂದೂರು ಮತ್ತಿತರ ಪ್ರಮುಖರು ಬಿಎಸ್‌ವೈಗೆ ಸಾಥ್ ನೀಡಿದರು. ಬಳಿಕ ಮಂಗಳೂರಿನಿಂದ ಪ್ರಯಾಣ ಬೆಳೆಸಿದ ಬಿಎಸ್‌ವೈ, ಮಳೆಯಿಂದ ಹಾನಿಗೀಡಾಗಿರುವ ಹಲವು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ2.30ರಿಂದ ಧರ್ಮಸ್ಥಳದಲ್ಲಿ ಸಭೆ ನಡೆಸಲಿರುವರು. ಮಳೆ ಹಾನಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬಳಿಕ ಬಂಟ್ವಾಳ ತಾಲ್ಲೂಕಿಗೆ ತೆರಳಿ ನೆರೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲಿರುವರು. ಸಂಜೆ ಬಂಟ್ವಾಳದಿಂದ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿ ವಿಶೇಷ ವಿಮಾನದಲ್ಲಿ ಸಂಜೆ 5.30ಕ್ಕೆ ಮೈಸೂರಿಗೆ ತೆರಳಲಿದ್ದಾರೆ.

Related posts

Leave a Reply

Your email address will not be published. Required fields are marked *