Header Ads
Breaking News

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್‌ಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ

ಕರಾವಳಿ ಉತ್ಸವ ಪ್ರಯುಕ್ತ ಪಣಂಬೂರು ಬೀಚ್‌ನಲ್ಲಿ ಮೂರು ದಿನಗಳಿಂದ ಆಯೋಜಿಸಲಾದ ಬೀಚ್ ಉತ್ಸವದ ಸಮಾರೋಪ ಸಮಾರಂಭವು ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರಿಗೆ ಕರಾವಳಿ ಗೌರವ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಗೋವಾ, ಕೇರಳಗಳಂತೆ ಕರ್ನಾಟಕದಲ್ಲೂ ಉತ್ತಮ ಸಮುದ್ರ ತೀರದ ತಾಣಗಳಿದ್ದು, ಅಭಿವೃದ್ಧಿ ಪಡಿಸಿ ಪ್ರವಾಸೋ ದ್ಯಮಕ್ಕೆ ಉತ್ತೇಜನ ನೀಡಲು ಸರಕಾರ 7 ಕೋ. ರೂ. ಮೀಸಲಿರಿಸಿದೆ ಎಂದು ಹೇಳಿದರು. ತಣ್ಣೀರುಬಾವಿ, ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಚಿಂತಿಸಲಾಗಿದೆ. ನಮ್ಮ ಬೀಚ್‌ಗಳಲ್ಲಿ ಅಭಿವೃದ್ಧಿಗೆ ಸ್ಥಳಾವ ಕಾಶದ ಕೊರತೆ ನಮಗೆ ಹಿನ್ನಡೆ ತಂದಿದೆ. ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಸರಕಾರ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಿದೆ ಎಂದರು.

ಇದೇ ವೇಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮನೋಹರ ಪ್ರಸಾದ್ ಅವರು, ವೃತ್ತಿ ಜೀವನದಲ್ಲಿ ಅನೇಕ ಪ್ರಶಸ್ತಿಗಳು ಬಂದಿವೆ. ಈ ಬಾರಿ ಮಹತ್ವದ ಗೌರವಕ್ಕೆ ಜಿಲ್ಲಾಡಳಿತ ಆರಿಸಿರುವುದಕ್ಕೆ ಸಂತಸವಾಗಿದೆ ಎಂದರು.

ಈ ಸಂದರ್ಭ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಮುಡಾ ಆಯುಕ್ತ ಶ್ರೀಕಾಂತ್ ರಾವ್, ಅರಣ್ಯಾಧಿಕಾರಿ ಶ್ರೀಧರ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಾ.ನಿ. ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಅಧಿಕಾರಿಗಳಾದ ಖಾದರ್ ಶಾ, ವೆಂಕಟೇಶ್, ಮಧು, ರಾಜೇಶ್, ನವೀನ್, ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿಯ ಸಿಇಒ ಯತೀಶ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು. ರಾಜೇಂದ್ರ ಕಲ್ಬಾವಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *