
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ಸಮ್ಮೇಳನ ಆಯೋಜನೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪ್ರಥಮ ವಿಭಾಗೀಯ ಮಟ್ಟದ ಪ್ರತಿನಿಧಿ ಸಮ್ಮೇಳನ ಜ.6 ರಂದು ಮಂಗಳವಾರ ಬಂಟ್ವಾಳದ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಮಾದ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಪಕ್ಷದ ಬಲ ವರ್ಧನೆಗಾಗಿ ಈ ವರ್ಷ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ನಿಟಿನಲ್ಲಿ ಪ್ರಥಮ ವಿಭಾಗೀಯ ಮಟ್ಟದ ಪ್ರತಿನಿಧಿ ಸಮ್ಮೇಳನ ಜ.6 ರಂದು ಮಂಗಳವಾರ ಬಂಟ್ವಾಳದ ಸಾಗರ್ ಆಡಿಟೋರಿಯಂನಲ್ಲಿ ನಡೆಯಲಿದ್ದು. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನೇಕ ಕಾ0ಗ್ರೆಸ್ ಮುಖಂಡರು ಸೇರಿದಂತೆ ಕಾಂಗ್ರಸ್ನ ಸುಮಾರು 650 ಪ್ರತಿನಿಧಿಗಳು ಈ ಸಮ್ಮೆಳನಲ್ಲಿ ಭಾಗವಹಿಸಲಿದ್ದಾರೆ. ಎಂದು ಸಮ್ಮೇಳನದ ಕುರಿತು ಮಾಹಿತಿ ನೀಡಿದರು.ಈ ಸಂದರ್ಭ ಶಾಸಕ ಯು.ಟಿ.ಖಾದರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಪನಪಾ ಸದಸ್ಯ ಶಶಿಧರ್ ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಮತ್ತಿತರ ಕಾಂಗ್ರಸ್ ನಾಯಕರು ಉಪಸ್ಥಿತರಿದ್ದರು.