Header Ads
Header Ads
Breaking News

ಕರ್ನಾಟಕ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ : ಎಸ್.ಡಿ.ಪಿ.ಐ.ರಾಜ್ಯಾಧ್ಯಕ್ಷ ಇಲ್ಯಾಸ್ ಮಹಮ್ಮದ್ ಹೇಳಿಕೆ

ಮುಖ್ಯಮಂತ್ರಿ ಕುಮಾರಸ್ವಾಮಿ ಫೆಬ್ರವರಿ 8ರಂದು ಸದನದಲ್ಲಿ ಮಂಡಿಸಿರುವ ಕರ್ನಾಟಕ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಎಸ್.ಡಿ.ಪಿ.ಐ.ರಾಜ್ಯಾಧ್ಯಕ್ಷ ಇಲ್ಯಾಸ್ ಮಹಮ್ಮದ್ ಹೇಳಿದರು.

ಇವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು 2ಲಕ್ಷ 34ಸಾವಿರದ 153ಕೋಟಿ ರೂಪಾಯಿಗಳ ಬಜೆಟ್‍ಅನ್ನು ಮಂಡಿಸಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಕೇವಲ 1 ಸಾವಿರ ಕೋಟಿಗೂ ಕಮ್ಮಿ ಹಣ ನೀಡಲಾಗಿದೆ. ಈ ಅಲ್ಪ ಮೊತ್ತದಿಂದ ಅಲ್ಪಸಂಖ್ಯಾತರ ಅಭಿವೃದ್ಧಿ ಅಸಾಧ್ಯ. ರಾಜ್ಯ ಸರ್ಕಾರವು ಬಿಜೆಪಿ ಮತ್ತು ಕೋಮುವಾದಿ ಶಕ್ತಿಗಳ ಒತ್ತಡಕ್ಕೆ ಮಣಿದು ಈ ರೀತಿಯ ತಾರತಮ್ಯ ಮಾಡುತ್ತಿದೆ. ಕೂಡಲೆ 10 ಸಾವಿರ ಕೋಟಿ ರೂಪಾಯಿ ಬಜೆಟ್ ನೀಡಬೇಕು ಎಂದು ಹೇಳಿದರು.
ಈ ಸಂದರ್ಭ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಿಯಾಝ್ ಪರಂಗಿಪೇಟೆ, ಅಕ್ರಮ್ ಹಸನ್, ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply