Header Ads
Header Ads
Breaking News

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟವಾಗಿದ್ದು, ಬ್ಯಾರಿ ಸಾಹಿತ್ಯ ಕ್ಷೇತ್ರ, ಕಲೆ ಮತ್ತು ಜಾನಪದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂವರಿಗೆ ಗೌರವ ಪ್ರಶಸ್ತಿ ಲಭಿಸಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಹೇಳಿದರು.ಅವರು ಮಂಗಳೂರಿನ ಶ್ರೀನಿವಾಸ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಅನಂತರ ಅಕಾಡೆಮಿಯ ಅಧ್ಯಕ್ಷ ಕರಂಬಾರ್ ಮುಹಮ್ಮದ್, ಪ್ರಶಸ್ತಿಗೆ ಆಯ್ಕೆಯಾದವರ ವಿವರವನ್ನು ಘೋಷಿಸಿದರು. ಬ್ಯಾರಿ ಸಾಹಿತ್ಯ ಕ್ಷೇತ್ರದಲ್ಲಿ ಝುಲೇಖಾ ಮುಮ್ತಾಝ್, ಬ್ಯಾರಿ ಕಲಾ ಕ್ಷೇತ್ರದಲ್ಲಿ ಖಾಲಿದ್ ತಣ್ಣೀರುಬಾವಿ ಹಾಗೂ ಬ್ಯಾರಿ ಜಾನಪದ ಕ್ಷೇತ್ರದಲ್ಲಿ ನೂರ್ ಮುಹಮ್ಮದ್ `ಗೌರವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಅದೇರೀತಿ ವಿ.ಮುಹಮ್ಮದ್ (ಜೀವರಕ್ಷಕ) ಹಾಗೂ ಬಿ.ಎಂ.ಉಮರ್ ಹಾಜಿ (ಸಮಾಜ ಸೇವೆ) `ಗೌರವ ಪುರಸ್ಕಾರ’ಕ್ಕೆ ಆಯ್ಕೆಯಾಗಿದ್ದಾರೆ ಎಂದವರು ತಿಳಿಸಿದರು. ಗೌರವ ಪ್ರಶಸ್ತಿಯು 50 ಸಾವಿರ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

ಜು.27ರಂದು ಅಪರಾಹ್ನ 3 ಗಂಟೆಗೆ ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಥಮ ಬ್ಯಾರಿ ವ್ಯಾಕರಣ ಗ್ರಂಥ ಬಿಡುಗಡೆಯಾಗಲಿದೆ. ಶಾಸಕ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವಾ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ ಎಂದು ಕರಂಬಾರ್ ಮುಹಮ್ಮದ್ ತಿಳಿಸಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಬಶೀರ್ ಬೈಕಂಪಾಡಿ, ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಹುಸೈನ್ ಕಾಟಿಪಳ್ಳ, ಅಬ್ದುಲ್ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *