Header Ads
Header Ads
Breaking News

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಅವಕಾಶ ನೀಡದ ಹಿನ್ನೆಲೆ,ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡಿನಲ್ಲಿರುವ ಹುತಾತ್ಮ ಯುದ್ಧ ಸ್ಮಾರಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯಪಾಲರ ವಿರುದ್ಧ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. ಗೋ ಬ್ಯಾಕ್ ಎಂದು ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರು ಸಂವಿಧಾನ ವಿರೋಧಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಪ್ರತ್ಯೇಕ ನೀತಿ ತರಲು ರಾಜ್ಯಪಾಲರು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related posts

Leave a Reply