
ಕಾಂಗ್ರೆಸ್ ಪಕ್ಷದ ಮುಖಂಡ ಪಜೀರು ನಿವಾಸಿ ಉಮರ್ ಪಜೀರು(58) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು.ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿ, ಗ್ರಾಪಂ ಮಾಜಿ ಸದಸ್ಯರಾಗಿ, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಪಕ್ಷದ ಸೇವೆ ಸಲ್ಲಿಸುವುದರೊಂದಿಗೆ ತಾಲೂಕು, ಜಿಲ್ಲಾ ಮಟ್ಟದಲ್ಲಿ ಪಕ್ಷದ ಹಲವು ಜವಾಬ್ದಾರಿಗಳನ್ನು ಉಮರ್ ಪಜೀರು ನಿಭಾಯಿಸಿದ್ದರು. ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾಗಿ, ಅಖಿಲ ಭಾರತ ಬ್ಯಾರಿ ಪರಿಷತ್, ಮಂಗಳೂರು ಇದರ ಸಕ್ರಿಯ ಕಾರ್ಯಕರ್ತರಾಗಿ, ಪಜೀರು ರಹ್ಮಾನೀಯ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿ ಹೀಗೆ ಹಲವಾರು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ರಾಜ್ಯ ಅಲ್ಪಸಂಖ್ಯಾತ ನಿಗಮದಲ್ಲಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಸಮಾಜಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದರು.
ಉಮರ್ ಪಜೀರ್ ಅವರ ನಿಧನಕ್ಕೆ ಶಾಸಕ ಯು.ಟಿ.ಖಾದರ್, ಮುಡಾ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.