
ಮಂಗಳೂರು ನಗರ ವೈವಿದ್ಯಮಯವಾದ ನಗರ. ಇನ್ನು ಕಾನೂನು ಸುವ್ಯವಸ್ಥೆಯಲ್ಲಿ ಅತ್ಯಂತ ಸೂಕ್ಷ್ಮವಾದ ಪ್ರದೇಶ. ಕಾನೂನು ಪಾಲನೆ ಮಾಡುವವರಿಗೆ ಬೆಂಬಲ ನೀಡುತ್ತೇವೆ. ಕಾನೂನು ಮೀರಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ್ರೆ ಅಂಥವರಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.ಮಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ತೆಗೆದುಕೊಳ್ಳುತ್ತೆವೆ. ಸಾರ್ವಜನಿಕರಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಮಾಡಲು ಇಲಾಖೆಯಿಂದ ಸೂಚನೆ ಇದೆ. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಮುಂದುವರಿಯುತ್ತದೆ. ಹಿರಿಯ ನಾಗರಿಕರು, ಹೆಣ್ಣು ಮಕ್ಕಳು ಮತ್ತು ಮಕ್ಕಳ ರಕ್ಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ. ಕಾನೂನು ಪಾಲನೆ ಮಾಡುವವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ಕಾನೂನು ಮೀರಿ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಇಂದಾಜೆ, ಅಣ್ಣು ಮಂಗಳೂರು ಉಪಸ್ಥಿತರಿದ್ದರು.