Header Ads
Header Ads
Breaking News

ಕಾಪುವಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರನೆ ನಡೆಯಿತು. ಕಾರ್ಯಕ್ರಮವನ್ನು ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಹಿರಿಯ ಬರಹಗಾರ ಜಲಂಚಾರು ರಘುಪತಿ ತಂತ್ರಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸತ್ಯವನ್ನು ಮರೆಮಾಚದೆ, ಯಾವುದೇ ಪ್ರಭಾವಕ್ಕೆ ಒಳಗಾಗದೆ, ಸತ್ಯನಿಷ್ಠೆಯಿಂದ ಕೂಡಿದ ವರದಿ ಮಾಡಿದಾಗ ಮಾತ್ರ ಆತನೋರ್ವ ಪರಿಪೂರ್ಣ ಶ್ರೇಷ್ಠ ಪತ್ರಕರ್ತನಾಗಲು ಸಾಧ್ಯ ಎಂಬುದಾಗಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ರು. ಸಭಾಧ್ಯಕ್ಷತೆಯನ್ನು ಕಾಪು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಕಟಪಾಡಿ ವಹಿಸಿದ್ದು, ಮುಖ್ಯ ಅಥಿತಿಗಳಾಗಿ ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ, ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಗಣೇಶ್ ಬಿಜೈ, ಮಾತೃ ಸಂಸ್ಥೆಯ ಕಾರ್ಯದರ್ಶಿ ವಾದಿರಾಜ್ ರಾವ್, ಕೋಶಾಧಿಕಾರಿ ಬಾಲಕೃಷ್ಣ ಪೂಜಾರಿ, ರಾಕೇಶ್ ಕುಂಜೂರು, ರಾಮಚಂದ್ರ ಆಚಾರ್, ಹರೀಶ್ ಹೆಜಮಾಡಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *