Header Ads
Breaking News

ಕಾಪು ಪ್ರವಾಸಿ ಬಂಗ್ಲೆ ಆವರಣದ ಮಿನಿ ವಿಧಾನಸೌಧ : ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ಕಾಪು ಪ್ರವಾಸಿ ಬಂಗ್ಲೆ ಆವರಣದ ಸುಮಾರು 4 ಎಕರೆ ಜಮೀನನ್ನು ಸರ್ಕಾರಿ ಸಮುಚ್ಛಯವಾಗಿ ಮಾರ್ಪಾಡಿಸಿ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿಸಲಾಗುವುದು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ತಿಳಿಸಿದರು.ಅವರು ಕಾಪುವಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕುರಿತಂತೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿ, 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿ ಸಹಿತ 30 ಇಲಾಖೆಗಳು ಕಾರ್ಯಚರಿಸಲಿವೆ. ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಾಣವಾಗುವ ಯೋಜನೆಗೆ ಪ್ರಾಥಮಿಕ ಅನುದಾನ ಬಿಡುಗಡೆಗಾಗಿ ಆರ್ಥಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೂ ಮನವಿ ಮಾಡಲಾಗಿದೆ. ಮಿನಿ ವಿಧಾನಸೌಧದಲ್ಲಿ ತಾಲೂಕು ಮ್ಯಾಜೀಸ್ಟ್ರೇಟ್ ಕಚೇರಿ, ತಾಲೂಕು ನ್ಯಾಯಾಲಯ ಒಳಗೊಂಡು ನೀಲಿ ನಕಾಶೆ ಸಿದ್ಧವಾಗಿದೆ.ಶೀಘ್ರ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದರು, ಈ ಸಂದರ್ಭ ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು, ಸದಸ್ಯ ರಮೇಶ್ ಕೆ ಪೂಜಾರಿ ಉಳಿಯಾರಗೋಳಿ, ತಹಶೀಲ್ದಾರ್ ಮಹಮ್ಮದ್ ಇಸಾಕ್, ಕಂದಾಯ ಪರಿವೀಕ್ಷಕ ರವಿಶಂಕರ್, ದೇವಿಪ್ರಸಾದ್ ಕನ್‍ಸ್ಟ್ರಕ್ಷನ್‍ನ ವಾಸುದೇವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *