Header Ads
Breaking News

ಕಾರ್ಕಳದಲ್ಲಿ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ವಿವಿಧ ಸವಲತ್ತುಗಳ ವಿತರಣೆ

ಕಾರ್ಕಳ ಕಂದಾಯ ಇಲಾಖೆ ವತಿಯಿಂದ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿವಿಧ ಸವಲತ್ತನ್ನು ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್ ವಿತರಿಸಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು ಇಂದು 51 ಮಂದಿಗೆ ನಿವೇಶನ ಹಕ್ಕು ಪತ್ರ 20 ಮಂದಿಗೆ ಭಾಗ್ಯಲಕ್ಷ್ಮಿ ಬಾಂಡ್ 109 ಮಂದಿಗೆ ಪ್ರಕೃತಿ ವಿಕೋಪದಲ್ಲಿ ಮನೆಮಠ ಕಳೆದುಕೊಂಡವರಿಗೆ ಪರಿಹಾರದ ಚೆಕ್ ವಿತರಿಸಲಾಗುವುದೆಂದು ಹೇಳಿದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಉದಯಕುಮಾರ್, ಸರಕಾರಿ ಕಾರ್ಯಕ್ರಮಗಳನ್ನು ಜನಸ್ನೇಹಿ ಆಗಲೂ ಶಾಸಕರು ಈ ಕಾರ್ಯಕ್ರಮವನ್ನು ಯಾವುದೇ ಮದುವೆ ಮಂಟಪಗಳಲ್ಲಿ ಇಡದೆ ತಾಲೂಕು ಕಚೇರಿಯಲ್ಲಿ ಇಟ್ಟಿರುವುದು ಬಹಳ ಸಂತೋಷದ ವಿಚಾರವಾಗಿದೆ ಎಂದರು. ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ತಾಲೂಕ್ ಪಂಚಾಯತ್ ನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಬೈಲೂರು ಸುಮಿತ್ ಶೆಟ್ಟಿ, ತಾಲೂಕು ದಂಡಾಧಿಕಾರಿ ಪುರಂದರ ಹೆಗಡೆ, ಸದಸ್ಯರಾದ ಹರೀಶ ಅಜೆಕಾರ್ ರೇಷ್ಮಾ ಉದಯ ಶೆಟ್ಟಿ ಹಾಗೂ ಅಧಿಕಾರಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *