Header Ads
Header Ads
Breaking News

ಕಾಲೇಜು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ಪುತ್ತೂರಿನಲ್ಲಿ ಇತ್ತೀಚಗೆ ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರಗೈದ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಶಕುಂತಳಾ ಶೆಟ್ಟಿ ಅವರು, ಸೌದಿ ಅರೇಬಿಯಾದಲ್ಲಿ ಅತ್ಯಾಚಾರಿಗೆ ಸಾರ್ವಜನಿಕ ಗಲ್ಲು ಶಿಕ್ಷೆ ನೀಡಲಾಗುತ್ತದೆ. ಹಾಗೇ ಭಾರತದಲ್ಲೂ ಕೂಡ ಗಲ್ಲು ಶಿಕ್ಷೆ ನೀಡುವ ಕಾನೂನು ಜಾರಿಗೊಳಿಸಬೇಕೆಂದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮನಾಥ ರೈ, ಶಶಿಧರ್ ಹೆಗ್ಡೆ ಅವರು ಮಾತನಾಡಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಧರಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಇಬ್ರಾಹೀಂ ಕೋಡಿಜಾಲ್, ಶಾಹುಲ್ ಹಮೀದ್ ಕೆ.ಕೆ., ಮಿಥುನ್ ರೈ, ಮುಹಮ್ಮದ್ ಮೋನು, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಸುರೇಶ್ ಬಲ್ಲಾಳ್ ಮತ್ತಿತರರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *