Header Ads
Breaking News

ಕಾಸರಗೋಡಿನ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ : ಕುಂಟಾರು ರವೀಶ್ ತಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ

ಕಾಸರಗೋಡಿನ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪ್ರಬಲ ನಾಯಕ ಹಾಗೂ ರಾಜ್ಯ ಸಮಿತಿ ಸದಸ್ಯ ಕುಂಟಾರು ರವೀಶ್ ತಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕೆ.ಶ್ರೀಕಾಂತ್ ಅವರನ್ನು ಎರಡನೇ ಬಾರೀ ಆಯ್ಕೆ ಮಾಡಿದ ಬೆನ್ನಿಗೆ ರವೀಶ್ ತಂತ್ರಿ ಅಸಮಾಧಾನಗೊಂಡಿದ್ದು, ರಾಜ್ಯ ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಕುರಿತ ರಾಜೀನಾಮೆ ಪಾತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ರಿಗೆ ಕಳುಹಿಸಿಕೊಟ್ಟಿದ್ದಾರೆ.ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರವೀಶ ತಂತ್ರಿ ಆಕಾ೦ಕ್ಷಿಯಾಗಿದ್ದರು. ಅಧ್ಯಕ್ಷ ಸ್ಥಾನಕ್ಕಾಗಿ ತಂತ್ರಿಯವರ ಹೆಸರು ಕೊನೆ ಕ್ಷಣ ತನಕವೂ ಕೇಳಿಬರುತ್ತಿತ್ತು. ಆದರೆ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಬಣದವರೆಂದು ಗುರುತಿಸಿಕೊಂಡಿರುವ ಶ್ರೀಕಾಂತ್ ರವರನ್ನು ರವಿವಾರ ರಾತ್ರಿ ಅಧ್ಯಕ್ಷರನ್ನಾಗಿ ಘೋಷಿಸಿದ ಬೆನ್ನಿಗೆ ತಂತ್ರಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

Related posts

Leave a Reply

Your email address will not be published. Required fields are marked *