Header Ads
Breaking News

ಕುಂದಾಪುರ ಟ್ರಾಫಿಕ್ ಹೆಡ್‍ಕಾನ್ಸ್ಟೇಬಲ್‍ಗೆ ಕೊರೊನಾ ಪಾಸಿಟಿವ್

ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯ 59 ವರ್ಷದ ಹೆಡ್ ಕಾನ್ಸ್ಟೇಬಲ್ ಓರ್ವರಿಗೆ ಭಾನುವಾರ ಕೊರೊನಾ ಪಾಸಿಟಿವ್ ದೃಡಪಟ್ಟಿದೆ. ಕೊರೊನಾ ಪಾಸಿಟಿವ್ ಹಿನ್ನೆಲೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಯಿದ್ದ ಪೊಲೀಸ್ ಕ್ವಾಟ್ರಸ್ ಸೀಲ್ ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಜ್ ಮಾಡುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಎರಡು ದಿನ ಕುಂದಾಪುರ ಪ್ರವಾಸಿ ಮಂದಿರಕ್ಕೆ ಠಾಣೆಯನ್ನು ಶಿಫ್ಟ್ ಮಾಡಲಾಗಿದೆ. 

ಸದ್ಯ ಕೊರೊನಾ ಪಾಸಿಟಿವ್ ದೃಡಪಟ್ಟ ಹೆಡ್ ಕಾನ್ಸ್ ಟೇಬಲ್ ಅವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ ಎಂದು ಕುಂದಾಪುರ ಉಪವಿಭಾಗದ ಎಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *