Header Ads
Breaking News

ಕುಡುಬಿ ಸಮುದಾಯವನ್ನು ಎಸ್.ಟಿ ಪಂಗಡಕ್ಕೆ ಸೇರಿಸಿ : ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಒತ್ತಾಯ

ಅವಿಭಜಿತ ದ.ಕ ಜಿಲ್ಲೆಯಲ್ಲಿ ವಾಸವಾಗಿರುವ, 50ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿರುವ ಕುಡುಬಿ ಸಮುದಾಯವನ್ನು ಎಸ್.ಟಿ ಪಂಗಡಕ್ಕೆ ಸೇರಿಸಬೇಕೆಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಒತ್ತಾಯಿಸಿದ್ದಾರೆ.

ಅವರು ಮೂಡುಬಿದಿರೆ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೃಷಿಯನ್ನು ಅವಲಂಬಿಸಿರುವ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕುಡುಬಿ ಸಮುದಾಯವನ್ನು ಎಸ್.ಟಿ ಪಂಗಡಕ್ಕೆ ಸೇರಿಸಬೇಕೆಂದು 1972ರಲ್ಲಿ ಸಂಸದರಾಗಿದ್ದ ಡಾ.ಟಿ.ಎ.ಪೈ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅಂದಿನಿಂದ ಇಂದಿನವರೆಗೆ ಹೋರಾಟ ನಡೆಯುತ್ತಿದ್ದರೂ ಬೇಡಿಕೆ ಈಡೇರಿಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಬೇಡಿಕೆ ಈಡೇರಿಸುವಂತೆ ಸದನದಲ್ಲಿ ಧರಣಿ ಕುಳಿತಿದ್ದೆ. ಆದರೂ ಪ್ರಯೋಜನವಾಗಿಲ್ಲ. ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಆದೇಶಿಸಿದ್ದರು. ಕುಲಶಾಸ್ತ್ರೀಯ ಅಧ್ಯಯನ ವರದಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಕೆಯಾಗಿದ್ದು ಆಯೋಗ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕುಡುಬಿ ಸಮುದಾಯದ ರಾಜ್ಯ ಸಮಿತಿ ಸದಸ್ಯ ಪುತ್ತುಗೌಡ ಮಾತನಾಡಿ ನಮ್ಮ ಬೇಡಿಕೆ ಈಡೇರಿಸುವಂತೆ ಸಂಸದರು, ಶಾಸಕರಲ್ಲಿ ಬೇಡಿಕೆ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದರು. ತಾಲೂಕು ಪಂಚಾಯತ್ ಸದಸ್ಯ ಪ್ರಕಾಶ್ ಗೌಡ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *