Header Ads
Breaking News

ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರೆ – ಮಹಾಶಿವರಾತ್ರಿ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರೆ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಆರಂಭಗೊಂಡಿದೆ. ಇನ್ನು ಫೆಬ್ರವರಿ 16ರಿಂದ 23ರತನಕ ಜಾತ್ರಮಹೋತ್ಸವ ನಡೆಯುತ್ತಿದೆ ಎಂದು ಶ್ರೀಕ್ಷೇತ್ರ ಕೋಶಾಧಿಕಾರಿ ಪದ್ಮರಾಜ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ್ರು. ಫೆಬ್ರವರಿ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಫೆಬ್ರವರಿ 21ರಂದು ಮಹಾಶಿವರಾತ್ರಿ ಕಾರ್ಯಕ್ರಮಗಳು ನಡೆಯಲಿದೆ. ಮಹಾಶಿವರಾತ್ರಿ ದಿನದಂದು ಸಾವಿರಾರು ಮಂದಿ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ಶ್ರೀಕ್ಷೇತ್ರದ ಅಧ್ಯಕ್ಷರಾದ ಹೆಚ್.ಎಸ್. ಸಾಯಿರಾವ್, ಉಪಾಧ್ಯಕ್ಷರಾದ ರಾಘವೇಂದ್ರ ಕುಳೂರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *