Header Ads
Header Ads
Breaking News

ಕುಲಾಲ ಸಂಘ ಮುಂಬಯಿಯಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ವಿತರಣೆ ಸಮಾರಂಭ

ಮುಂಬಯಿ : ಕುಲಾಲ ಸಮುದಾಯದ ಅರ್ಹ ವಿಧ್ಯಾರ್ಥಿಗಳಿಗೆ ಪ್ರತೀ ವರ್ಷ ನೀಡಲಾಗುತ್ತಿರುವ ಆರ್ಥಿಕ ನೆರವು ವಿತರಣೆಯ ಸಮಾರಂಭ ಕುಲಾಲ ಸಂಘ ಮುಂಬಯಿಯ ಫೋರ್ಟ್ ಕಚೇರಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ದೇವದಾಸ್ ಕುಲಾಲ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು. ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ ಸಾಲ್ಯಾನ್ ಅವರು ಮೊದಲು ಉಪಸ್ಥಿತರಿದ್ದ ಎಲ್ಲ ವಿದ್ಯಾರ್ಥಿಗಳನ್ನು ಪಾಲಕರನ್ನು ಹಾಗೂ ಎಲ್ಲಾ ಗಣ್ಯರನ್ನು ಸದಸ್ಯರನ್ನು ಸ್ವಾಗತಿಸಿದರು.
ಸಂಘದ ಪದಾಧಿಕಾರಿಗಳು ಹಾಗೂ ಅತಿಥಿಗಳಿಂದ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಉದ್ಯಮಿ ಶ್ರೀಧರ ಡಿ. ಬಂಗೇರ, ಜ್ಯೋತಿ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ ಸಾಲ್ಯಾನ್, ದಾನಿ ಸುನಿಲ್ ಆರ್ ಸಾಲ್ಯಾನ್, ಉಪಾಧ್ಯಕ್ಷ ರಘು ಎ. ಮೂಲ್ಯ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಗುಜರನ್, ಕೋಶಾಧಿಕಾರಿ ಜಯ ಎಸ್. ಅಂಚನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *