

ಎಂಆರ್ಜಿ ಗ್ರೂಪ್ ಇದರ ವತಿಯಿಂದ ಅನಾರೋಗ್ಯ ಪೀಡಿತರಿಗೆ, ಅಶಕ್ತರಿಗೆ, ವಿದ್ಯಾಭ್ಯಾಸದ ನೆರವಿಗೆ 1,25,75,000 ಕೋಟಿ ರೂ. ಮೊತ್ತದ ಸಹಾಯಧನ ವಿತರಣಾ ಕಾರ್ಯಕ್ರಮ ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಕಾಶಭಿನಂದನ ಆಯ್ಕೆ ಸಮಿತಿ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಫಲಾನುಭವಿಗಳ ಪಟ್ಟಿಯನ್ನು ವಾಚಿಸಿದರು. ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳ 540ಕ್ಕೂ ಹೆಚ್ಚು ಸಂತ್ರಸ್ತರಿಗೆ ಸಹಾಯಧನ ವಿತರಿಸಿಸಲಾಯಿತು. ಈ ವೇಳೆ ಎಂ ಆರ್ ಜಿ ಗ್ರೂಪ್ ಸಂಸ್ಥಾಪಕ ಕೆ. ಪ್ರಕಾಶ್ ಶೆಟ್ಟಿ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ವಿಶ್ವ ಬಂಟರ ಸಂಘದ ಅಧ್ಯಕ್ಷ ಎ.ಜೆ. ಶೆಟ್ಟಿ, ಸದಾನಂದ ಶೆಟ್ಟಿ, ಆಳ್ವಾಸ್ ಫೌಂಡೇಶನ್ ಅಧ್ಯಕ್ಷ ಮೋಹನ್ ಆಳ್ವ, ಮನೋಹರ್ ಶೆಟ್ಟಿ ಸಾಯಿರಾಧ, ಮತ್ತಿತರರು ಉಪಸ್ಥಿತರಿದ್ದರು.