Header Ads
Breaking News

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ಸಿಬಿಐ ದಾಳಿಗೆ ಖಂಡನೆ : ಡಿಕೆಶಿ ಬೆಂಬಲಿಗರಿಂದ ಪ್ರತಿಭಟನೆ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ, ಕಚೇರಿಗಳ ಮೇಲೆ ನಡೆದಿರುವ ಸಿಬಿಐ ಅಧಿಕಾರಿಗಳ ದಾಳಿಗೆ ಎಲ್ಲೆಡೆ ಡಿಕೆ ಶಿವಕುಮಾರ್ ಅಭಿಮಾನಿಗಳು, ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಹಲವೆಡೆ ಈ ದಾಳಿಯನ್ನು ಖಂಡಿಸಿ ಪ್ರತಿಭಟನೆಗಳು ನಡೆದಿದ್ದು, ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲೂ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Related posts

Leave a Reply

Your email address will not be published. Required fields are marked *