Header Ads
Breaking News

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ಗೆ ಸಿಬಿಐ ಕಂಟಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಬಿಐ ದಾಳಿ ನಡೆದಿದೆ. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಬೆನ್ನಲ್ಲೇ ಇದೀಗ ಸಿಬಿಐ ದಾಳಿ ನಡೆಸಿದೆ. ಬೆಂಗಳೂರಿನ ಸದಾಶಿವ ನಗರದ ಅವರ ನಿವಾಸದ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಬೆಳಗ್ಗೆ 6 ಗಂಟೆಯಿಂದಲೇ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರಿಗೆ ಸಂಬಂಧಿಸಿದ ಸದಾಶಿವನಗರ, ಕನಕಪುರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಇದೀಗ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಕರ್ನಾಟಕದಲ್ಲಿ 9, ದಿಲ್ಲಿಯಲ್ಲಿ 4, ಮುಂಬೈನಲ್ಲಿ ಒಂದು ಸೇರಿದಂತೆ ಡಿಕೆಶಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಇಂದು ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಈ ನಡುವೆ ಸಿಬಿಐನ ಬೆಂಗಳೂರು ಘಟಕದಲ್ಲಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಮನೆ ಕಚೇರಿಗಳ ಮೇಲೂ ಸಿಬಿಐ ದಾಳಿ ನಡೆಸಿದೆ.

Related posts

Leave a Reply

Your email address will not be published. Required fields are marked *