Header Ads
Header Ads
Breaking News

ಕೆಫೆ ಕಾಫಿಡೆ ಮಾಲಕ ಸಿದ್ಧಾರ್ಥ್ ಮೃತದೇಹ ಪತ್ತೆ

ಕಳೆದ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕಾಫಿ ಡೇ ಮಾಲೀಕ ವಿಜಿ ಸಿದ್ದಾರ್ಥ ಅವರ ಮೃತದೇಹ ನೇತ್ರಾವತಿ ನದಿ ನೀರಿನ ಹೊಯ್ಗೆಬಜಾರ್ ಬಳಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಇದರೊಂದಿಗೆ ಸಿದ್ದಾರ್ಥ ನಾಪತ್ತೆ ಪ್ರಕರಣದ ಗೊಂದಲಕ್ಕೆ ತೆರೆ ಬಿದ್ದಿದೆ.


ನೇತ್ರಾವತಿ ಸಮೀಪ ಸೋಮವಾರ ಸಂಜೆಯಿಂದ ಸಿದ್ದಾರ್ಥ ಅವರು ನಿಗೂಢವಾಗಿ ನಾಪತ್ತೆಯಾಗಿದ್ದರು. ಅವರನ್ನು ಅಪಹರಿಸಲಾಗಿತ್ತೇ ಅಥವಾ ಆತ್ಮಹತ್ಯೆಗೆ ಶರಣಾಗಿದ್ದರೇ ಎಂಬಿತ್ಯಾದಿ ಅನುಮಾನಗಳು ವ್ಯಕ್ತವಾಗಿದ್ದವು. ಅಗ್ನಿಶಾಮಕ ದಳ, ಹೋವರ್ ಕ್ರಾಫ್ಟ್ ಎನ್ ಡಿಆರ್ ಎಫ್ ಸತತ ಶೋಧ ಕಾರ್ಯಾಚರಣೆ ನಡೆಸಿದ್ದವು.


ಪೊಲೀಸರು ಕೂಡಾ ಸಿದ್ದಾರ್ಥ ಕಾರು ಚಾಲಕನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಏತನ್ಮಧ್ಯೆ ಕಾಫಿ ಡೇ ಸಂಸ್ಥೆಯನ್ನು ಬಂದ್ ಮಾಡಲಾಗಿತ್ತು. ಇದೀಗ ಇಂದು ಬೆಳಗ್ಗೆ ನೇತ್ರಾವತಿ ನದಿಯ ಹೊಯ್ಗೆ ಬಜಾರ್ ನ ಐಸ್ ಪ್ಲಾಂಟ್ ಬಳಿ ಕಡಲ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಮೀನುಗಾರರು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಗಮನಕ್ಕೆ ಬಂದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.

Related posts

Leave a Reply

Your email address will not be published. Required fields are marked *