Header Ads
Header Ads
Header Ads
Header Ads
Header Ads
Header Ads
Breaking News

ಕೇಂದ್ರ ಮೋಟಾರ್ ವಾಹನ ಕಾಯಿದೆ ತಿದ್ದುಪಡಿ ವಿಚಾರ ; ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರದ ವತಿಯಿಂದ ಬಿ.ಸಿ.ರೋಡಿನಲ್ಲಿ ಧರಣಿ

ಬಂಟ್ವಾಳ: ಕೇಂದ್ರ ಮೋಟಾರ್ ವಾಹನ ಕಾಯಿದೆ ತಿದ್ದುಪಡಿ ರದ್ದುಗೊಳಿಸಿ, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕಟ್ಟುನಿಟ್ಟಿನ ಕಾಯಿದೆ ಜಾರಿಗೆ ತರುವಂತೆ ಆಗ್ರಹಿಸಿ ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರದ ವತಿಯಿಂದ ಬಿ.ಸಿ.ರೋಡಿನ ಜಂಕ್ಷನ್‌ನಲ್ಲಿ ಧರಣಿ ನಡೆಯಿತು. ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಧರಣಿನಿರತರನ್ನುದ್ದೇಶಿಸಿ ಮಾತನಾಡಿ, ದೇಶದಾದ್ಯಂತ ಆರ್ಥಿಕ ಹಿಂಜರಿತದಿಂದಾಗಿ ಉತ್ಪದನಾ ಕ್ಷೇತ್ರ ಸಂಪೂರ್ಣವಾಗಿ ಕುಸಿದಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಮೋಟಾರ್ ವಾಹನ ಕಾಯಿದೆ ತಿದ್ದುಪಡಿ ಮಾಡಿ ಸಂಚಾರಿ ನಿಯಮ ಉಲ್ಲಂಘನೆಗೆ ಬಾರೀ ದಂಡ ವಿಧಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ. ಈ ಕಾಯಿದೆಯನ್ನು ಎಸ್ಡಿಪಿಐ ಖಂಡಿಸುತ್ತದೆ ಎಂದು ಹೇಳಿದರು. ಎಸ್ಡಿಪಿಐ ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ ಅಧ್ಯಕ್ಷತೆ ವಹಿಸಿದ್ದರು.ಧರಣಿಯಲ್ಲಿ ಎಸ್ಡಿಟಿಯು ದ.ಕ. ಜಿಲ್ಲಾಧ್ಯಕ್ಷ ಜಾಬಿರ್ ಅರಿಯಡ್ಕ, ಎಸ್ಡಿಪಿಐ ವಿಟ್ಲ ಸಮಿತಿ ಅಧ್ಯಕ್ಷ ಮುಹಮ್ಮದ್ ಕಡಂಬು, ಎಸ್ಡಿಪಿಐ ಉಪಾಧ್ಯಕ್ಷ ಖಲಂದರ್ ಪರ್ತಿಪಾಡಿ, ಕಾರ್ಯದರ್ಶಿ ಇಸ್ಮಾಯಿಲ್ ಬಾವ ಹಾಜರಿದ್ದರು. ಬಳಿಕ ಮನವಿಯನ್ನು ತಹಶೀಲ್ದಾರ್ ಅವರ ಮೂಲಕ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಲಾಯಿತು.

 

Related posts

Leave a Reply

Your email address will not be published. Required fields are marked *