Header Ads
Breaking News

ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಸದನದಲ್ಲಿ ಮುಕ್ತ ಚರ್ಚೆಗೆ ಒಳಪಡಿಸಿ : ಉಡುಪಿಯಲ್ಲಿ ಎಸ್.ಐ.ಓ. ಆಗ್ರಹ

ಕೇಂದ್ರ ಸರಕಾರದ ರಾಷ್ಟ್ರೀಯ ಶಿಕ್ಷಣ ನೀತಿ-2020 ನ್ನು ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಒಳಪಡಿಸಬೇಕು ನಂತರ ಅದನ್ನು ಜಾರಿಗೆಗೊಳಿಸಬೇಕು ಎಂದು ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೆಶನ್ ಆಫ್ ಇಂಡಿಯಾ ಒತ್ತಾಯಿಸಿದೆ.

ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೆಶನ್ ಆಫ್ ಇಂಡಿಯಾ ಕಾರ್ಯದರ್ಶಿ ಡಾ.ಫಹೀಮ್ ಹೂಡೆ , ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ರೀತಿ ಚರ್ಚೆ ನಡೆಸದೆ, ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಜಾರಿ ಮಾಡಲು ಹೊರಟಿರುವ ಕೇಂದ್ರ ಬಿ.ಜೆ.ಪಿ ಸರ್ಕಾರದ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದ್ದ ಬದಲಾವಣೆಗಳ ಕುರಿತು ವಿಧಾನ ಸಭೆಮತ್ತು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಜನಪ್ರತಿನಿಧಿಗಳು ಚರ್ಚೆ ನಡೆಸಿದ ನಂತರ ಗೋಚರವಾಗುವ ಸರಿ ತಪ್ಪು ವಿಚಾರವನ್ನು ತಿದ್ದುಪಡಿಗೆ ತಂದು ಒಳ್ಳೆಯ ಅಂಸಗಳನ್ನು ಪುಷ್ಟಿಕರಿಸಿ ಅದನ್ನು ಸದನದಲ್ಲಿ ಮಂಡಿಸಿ ರಾಜ್ಯಕ್ಕೆ ಅನುಗುಣವಾಗುವ ಸಮಗ್ರ ನೂತನ ಶಿಕ್ಷಣ ನೀತಿಯನ್ನು ಅಂಗೀಕರಿಸಿ ಜಾರಿಗೊಳಿಸುವುದು ಉತ್ತಮ ಕ್ರಮವಾಗಿದೆ ಎಂಬುದನ್ನು ಘಟಕದ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೆಶನ್ ಆಫ್ ಇಂಡಿಯಾ ರಾಜ್ಯ ಸರಕಾರಕ್ಕೆ ಸಲಹಎಯನ್ನು ನೀಡಲು ಬಯಸುತ್ತದೆ ಎಂದರು..

ಸುದ್ದಿಗೋಷ್ಟಿಯಲ್ಲಿ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೆಶನ್ ಆಫ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಮಹಮದ್ ಶಾರೂಕ್,, ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೆಶನ್ ಆಫ್ ಇಂಡಿಯಾ ಜಿಲಾಧ್ಯಕ್ಷರಾದ ನಾಸೀರ್ ಹೂಡೆ ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *