Header Ads
Breaking News

ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧ- ಗಡಿಭಾಗ ತಲಪಾಡಿಯಲ್ಲಿ ಬಿಗುವಿನ ವಾತಾವರಣ

ಉಳ್ಳಾಲ: ಮಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೇರಳ ಸರಕಾರ ಕೇರಳಿಗರಿಗೆ ಮಂಗಳೂರು ಪ್ರವೇಶ ನಿರ್ಬಂಧಿಸಿದ ಕಾರಣ ಪಾಸ್ ಹಿಡಿದು ದಿನನಿತ್ಯ ಕೆಲಸಕ್ಕೆ ಬರುತ್ತಿದ್ದವರನ್ನು ಕೇರಳ ಪೊಲೀಸರು ತಲಪಾಡಿಯಲ್ಲಿ ತಡೆಹಿಡಿದಿರುವುದು ಗೊಂದಲಕ್ಕೆ ಕಾರಣವಾಗಿದೆ. ೧೦೦ ಕ್ಕೂ ಅಧಿಕ ಮಂದಿ ಸ್ಥಳದಲ್ಲಿ ಜಮಾಯಿಸಿ ಪೊಲೀಸರ ಜತೆಗೆ ವಾಗ್ವಾದಕ್ಕಿಳಿದಿದ್ದು, ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ.

ಜು.11 ರ ಅವಧಿವರೆಗೆ ದ.ಕ ಜಿಲ್ಲಾಡಳಿತ ನೀಡಿರುವ ಪಾಸ್ ಇದೆ. ಅ ಸಮಯ ಬಿಡಬೇಕು ಎಂದು ಮಂಗಳೂರಿಗೆ ಬರುವ ಮಂದಿ ಕೇರಳ ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಮಂಗಳೂರು ಬಂದ ಐದು ಮಂದಿಯಲ್ಲಿ ಕೊರೊನಾ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳ ಸರಕಾರದ ಕಠಿಣ ಆದೇಶ ಇರುವುದರಿಂದ ಮಂಗಳೂರಿಗೆ ಹೋದಲ್ಲಿ ಅಲ್ಲಿಯೇ ಉಳಿದುಕೊಳ್ಳಿ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಇದರಿಂದ ಪೊಲೀಸರ ಹಾಗೂ ಜನರ ನಡುವೆ ವಾಗ್ವಾದ ನಡೆದಿದೆ. ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ. ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡ ವಕೀಲ ನವೀನ್ ರಾಜ್, ಭಾರತೀಯ ರೈಲ್ವೇ ಮಜ್ದೂರ್ ಸಂಘ ಡಿವಿಸನಲ್ ಅಧ್ಯಕ್ಷ ತುಳಸೀದಾಸ್, ಮಂಜೇಶ್ವರ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಅವಿನಾಶ್, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಆದಶ ಬಿ.ಎಂ ಇದ್ದಾರೆ.

Related posts

Leave a Reply

Your email address will not be published. Required fields are marked *