Header Ads
Breaking News

ಕೇರಳ ಸಹಿತ ಕಾಸರಗೋಡು ಜಿಲ್ಲೆಗೆ ಭಾನುವಾರ ಯಾವುದೇ ಪಾಸಿಟಿವ್ ಪ್ರಕರಣಗಳಿಲ್ಲ

ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ ಕೂಡ ಹೊಸ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ. ಅದೇ ವೇಳೆ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ಸೋಂಕು ಬಾಧಿ ಸಿದ್ದು, ಈ ಪೈಕಿ 172 ಮಂದಿ ಗುಣಮುಖರಾಗಿದ್ದಾರೆ. 7 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯ ರಿಕವರಿ ರೇಟ್ ಶೇ.96.6 ಆಗಿದೆ.

ಜಿಲ್ಲೆಯಲ್ಲಿ 1604 ಮಂದಿ ಆಸ್ಪತ್ರೆಗಳಲ್ಲಿ, 29 ಮಂದಿ ಮನೆಗಳಲ್ಲಿ ನಿಗಾದಲ್ಲಿದ್ದಾರೆ. ಭಾನುವಾರ ನೂತನವಾಗಿ 6 ಮಂದಿಯನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. 316 ಮಂದಿ ತಮ್ಮ ನಿಗಾ ಕಾಲಾವಧಿ ಪೂರ್ಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ 4808 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಲಭ್ಯ 3983 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. ರಾಜ್ಯದಲ್ಲಿ ಕೂಡಾ ಭಾನುವಾರ ಹೊಸದಾಗಿ ಕೊರೊನಾ ಸೋಂಕು ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಒಬ್ಬರು ಗುಣಮುಖರಾಗಿದ್ದಾರೆ.

Related posts

Leave a Reply

Your email address will not be published. Required fields are marked *