Header Ads
Header Ads
Breaking News

ಕೊಣಾಜೆ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಹೊಸ ಟ್ವೀಸ್ಟ್

 ಕೊಣಾಜೆ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿ ನಿಫಿಯೋನಾ ಸ್ವೀಡಲ್ ಕುಟಿನ್ಹಾ ಕೊಲೆ ಪ್ರಕರಣವು ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ವಿದ್ಯಾರ್ಥಿನಿಯನ್ನು ಗಾಂಜಾ ವ್ಯಸನಿ ಆಕೆಯ ಅಣ್ಣನೇ ಬರ್ಬರವಾಗಿ ಕೊಲೆಮಾಡಿರುವ ಭಯಾನಕ ವಿಚಾರ ಪೊಲೀಸ್ ತನಿಖೆಯಿಂದ ಬಹಿರಂಗಗೊಂಡಿದೆ. ತಂಗಿಯನ್ನೇ ಹತ್ಯೆಗೈದ ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿ ಸ್ಯಾಮ್ಸನ್ ಗಾಂಜಾ ವ್ಯಸನಿ ಎಂಬುದು ತನಿಖೆಯಿಂದ ಖಚಿತಗೊಂಡಿದೆ.ಅ.8ರಂದು ಪಿಯೋನಾ ಮಂಗಳೂರಿಗೆ ಹೋಗುವುದಾಗಿ ತಿಳಿಸಿ ನಾಪತ್ತೆಯಾಗಿದ್ದು, ಯಾರೋ ಅಪಹರಿಸಿರುವ ಸಾಧ್ಯತೆಯಿದೆಯೆಂದು ಕೊಣಾಜೆ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದರು. ಅಪ್ರಾಪ್ತ ಬಾಲಕಿಯ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಬ್ಬಂದಿ ತನಿಖೆ ಆರಂಭಿಸಿದ್ದರು. ಪ್ರಾಥಮಿಕ ಹಂತದಲ್ಲಿ ಹಲವಾರು ಅನುಮಾನಗಳಲ್ಲಿ ಹಿನ್ನಲೆಯಲ್ಲಿ ಸಹಪಾಠಿಗಳು, ಒಡನಾಡಿಗಳ ವಿಚಾರಣೆ ನಡೆಸಲಾಗಿತು. ತಾಂತ್ರಿಕವಾಗಿಯೂ ಬೇರೆ ಬೇರೆ ಆಯಾಮಗಳಲ್ಲಿ ಪರಿಶೀಲನೆ ನಡೆಸಲಾಗಿತ್ತು. ಆರೋಪಿಯನ್ನ ಹೆಚ್ಚಿನ ವಿಚಾರಣೆ ನಡೆಸಿದಾಗ ಒಬ್ಬನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾಗಿ ಹಾಗೂ ಮೃತದೇಹವನ್ನು ತೋಡೊಂದಕ್ಕೆ ಎಸದಿರುವುದಾಗಿ ಹೇಳಿದ್ದಾನೆ. ನಿರಂತರ ಮಳೆ ಬರುತ್ತಿದ್ದ ಕಾರಣ ಆ ಪ್ರದೇಶಕ್ಕೆ ಯಾರೂ ಹೋಗುತ್ತಿರಲಿಲ್ಲ ಎಂದು ಅವರು ಮಾಹಿತಿ ನೀಡಿದ್ದರು.

ತಂಗಿಗೆ ಮನೆಯಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ತನ್ನನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಯುವಕ ಅಂದುಕೊಂಡಿದ್ದ. ಇದೇ ಹಿನ್ನೆಲೆಯಲ್ಲಿ ಅಣ್ಣ-ತಂಗಿಯ ಮಧ್ಯೆ ಜಗಳ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೃತ್ಯ ಎಸಗಿರುವ ಬಗ್ಗೆ ವಿಚಾರಣೆ ಸಂದರ್ಭದಲ್ಲಿ ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಕಮೀಷನರ್ ತಿಳಿಸಿದ್ರು. ಬಂಧಿತ ಆರೋಪಿಗೆ ನ್ಯಾಯಾಂಗ ವಿಧಿಸಲಾಗಿದ್ದು, ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿ ತೆಗೆದುಕೊಳ್ಳಲಾಗುವುದು ಅಂತಾ ಕಮೀಷನರ್ ತಿಳಿಸಿದ್ರು.

Related posts

Leave a Reply

Your email address will not be published. Required fields are marked *