Header Ads
Breaking News

ಕೊರೊನಾದ ಸಂದರ್ಭ ನಿಸ್ವಾರ್ಥ ಸೇವೆ ಮಾಡುವ ಆಶಾ ಕಾರ್ಯಕರ್ತೆಯರು

ಕೊರೊನಾದ ಮಹಾಸಂಕಷ್ಟದ ಕಾಲದಲ್ಲಿ ಆಶಾ ಕಾರ್ಯಕರ್ತೆಯರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.. ಅದರಲ್ಲೂ ಕುಗ್ರಾಮಗಳಿಗೆ ಪ್ರತಿನಿತ್ಯ ನೂರಾರು ಅಡೆತಡೆಗಳನ್ನು ಎದುರಿಸಿ ಕಾರ್ಯಕರ್ತೆಯರು,ವೈದ್ಯಕೀಯ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ..ನಕ್ಸಲ್ ಪೀಡತ ಗ್ರಾಮವಾದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಕೊರಗ ಕಾಲೊನಿಗೆ ಆಶಾ ಕಾರ್ಯಕರ್ತೆಯರು ತೆರಳುವುದೇ ಮಹಾ ಸವಾಲು..ರಭಸದಿಂದ ಹರಿಯುವ ಹೊಳೆಯನ್ನು, ಜೀವ ಕೈಯಲ್ಲಿ ಹಿಡಿದು ಆಶಾ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ..ಕೊರಗ ಕಾಲೋನಿಯಲ್ಲಿ 40 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದೆ…ಕೆಲ ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳೂ ಕಾಣಿಸಿಕೊಂಡಿದೆ.ಮಳೆಯ ನಡುವೆ ರಭಸದಿಂದ ಹರಿಯುವ ಹೊಳೆಯನ್ನು ದಾಟಿ ಚಿಕಿತ್ಸೆ ಹೋಗೋದು ಅಸಾಧ್ಯವಾಗಿರೋದ್ರಿಂದ ಆಶಾ ಕಾರ್ಯಕರ್ತೆಯರು ಪ್ರತಿದಿನ ಆ ಭಾಗಗಕ್ಕೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ..ಕಾರ್ಯಕರ್ತೆ ಯರ ನಿಸ್ವಾರ್ಥ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Related posts

Leave a Reply

Your email address will not be published. Required fields are marked *