Header Ads
Breaking News

ಕೊರೊನಾ ನಿಯಂತ್ರಣಕ್ಕೆ ಗಂಭೀರ ಪ್ರಯತ್ನ ಅಗತ್ಯ ಕರ್ತವ್ಯಲೋಪ ಎಸಗಿದರೆ ಅಧಿಕಾರಿಗಳ ಅಮಾನತು : ಡಾ.ಕೆ.ವಿ.ರಾಜೇಂದ್ರ ಸೂಚನೆ

ಪುತ್ತೂರು: ಕೋವಿಡ್ ವೈರಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯದ ಮೊದಲ ಜಿಲ್ಲೆಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆ ಸೇರಿದ್ದು ಕೋವಿಡ್ ನಿಯಂತ್ರಣಕ್ಕೆ ಇಲ್ಲಿ ಗಂಭೀರ ಪ್ರಯತ್ನಗಳು ನಡೆಯಬೇಕಾಗಿದೆ. ನಗರಸಭೆ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೋವಿಡ್ ನಿಯಂತ್ರಣ, ಮತ್ತು ಹೆಚ್ಚಿನ ನಿಗಾ ವಹಿಸಬೇಕು. ಕೋವಿಡ್ ನಿಯಂತ್ರಣ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ

ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗ್ರಾಮ ಪಂಚಾಯತ್‍ಗಳಲ್ಲಿ ಆಡಳಿತ ಮಂಡಳಿಗಳಿಲ್ಲ. ಗ್ರಾಮ ಪಂಚಾಯತ್‍ಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆಯ ಸಹಕಾರದೊಂದಿಗೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ
ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಶಾಲಾರಂಭದ ಕುರಿತಂತೆ ಅ. 15ರಿಂದ ಶಾಲೆಗಳನ್ನು ಆರಂಭಿಸುವಂತೆ ಸರ್ಕಾರ ತಿಳಿಸಿದ್ದರೂ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೊಷಕರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ಒತ್ತಾಯ ಹೇರಬಾರದು. ಸರ್ಕಾರಿ ಮತ್ತು
ಖಾಸಗಿ ಶಾಲೆಗಳಲ್ಲಿ ಸೆನಿಟೈಸೇಷನ್ ಮತ್ತು ಸಾಮಾಜಿಕ ಅಂತರ ಕಾಪಾಡುವ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ರಿಯಾಯಿತಿಗಳನ್ನು ಕೋವಿಡ್ ಮುನ್ನೆಚರಿಕೆ ಕುರಿತಂತೆ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿಯವರು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಪುತ್ತೂರು ಎಎಸ್‍ಪಿ ಲಖನ್ ಸಿಂಗ್ ಯಾಧವ್, ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು, ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಪುತ್ತೂರು ನಗರಸಭಾ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *