Header Ads
Breaking News

ಕೊರೊನಾ ಸೋಂಕಿನಿಂದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಪ್ರಕರಣಗು ಮಿತಿ ಮೀರಿದ್ದು, ಪ್ರತಿದಿನ 100ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಅಲ್ಲದೆ ಕಳೆದ ಒಂದು ವಾರದಿಂದ ಬಹುತೇಕ ಪ್ರತಿದಿನ ಕೊರೊನಾ ದಿಂದ ಸಾವು ಸಂಭವಿಸುತ್ತಿದ್ದು, ಆತಂಕ ಸೃಷ್ಠಿಸಿದೆ.

Related posts

Leave a Reply

Your email address will not be published. Required fields are marked *