Header Ads
Header Ads
Breaking News

ಕೊಲ್ಲಂಗಾನ ಶ್ರೀನಿಲಯ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ

ಮಂಜೇಶ್ವರ: ಶ್ರೀಮಂತ ಸಂಸ್ಕೃತಿಯ ಭಾಗವಾಗಿರುವ ಯಕ್ಷಗಾನ ಕನ್ನಡ ನೆಲದ ಸಂಪದ್ಭರಿತ ಕಲೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ, ಪತ್ರಕರ್ತೆ ವಿದ್ಯಾಗಣೇಶ್ ಅಣಂಗೂರು ಅಭಿಪ್ರಾಯಪಟ್ಟರು.
ಅವರು ಕೊಲ್ಲಂಗಾನ ಶ್ರೀನಿಲಯ ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ಹಾಗೂ ಶ್ರೀ ಸುಬ್ರಹ್ಮಣ್ಯ ಯಕ್ಷಗಾನ ಕಲಾ ಸಂಘ ಕೊಲ್ಲಂಗಾನ ಇದರ 31ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಯಕ್ಷ ದಶ ವೈಭವದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಹೆಸರಾಂತ ಯಕ್ಷಗಾನ ಕಲಾ ಸಾಧಕ ಶೇಖರ ಮಣಿಯಾಣಿ ಸುಳ್ಯ ಹಾಗೂ ಯಕ್ಷಗುರು ರಾಕೇಶ್ ರೈ ಅಡ್ಕ ಅವರನ್ನು ಗೌರವಿಸಲಾಯಿತು. ಬ್ರಹ್ಮಶ್ರೀ ತಂತ್ರಿ ಗಣಾಧಿರಾಜ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ರು. ಶ್ಯಾಮ್ ಪ್ರಸಾದ್ ಮಾನ್ಯ, ಪ್ರೋ. ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು. ಈ ಪ್ರಯುಕ್ತ ಯಕ್ಷನಾಟ್ಯಗುರು ರಾಕೇಶ್ ರೈ ಅವರ ಮಾರ್ಗದರ್ಶನದಲ್ಲಿ ಯಕ್ಷನಾಟ್ಯಾಲಯ ದೇವರಕೆರೆ, ಮಾನ್ಯ ಇಲ್ಲಿನ ವಿದ್ಯಾರ್ಥಿಗಳಿಂದ ಚಕ್ರವ್ಯೂಹ ಯಕ್ಷಗಾನ ಬಯಲಾಟ ಜನಮನ ರಂಜಿಸಿತು.

Related posts

Leave a Reply

Your email address will not be published. Required fields are marked *