Header Ads
Header Ads
Breaking News

ಕೊಳ್ನಾಡುವಿನ ಸುರಿಬೈಲು ಉನ್ನತೀಕರಿಸಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ ಕಾರ್ಯಕ್ರಮ

ವಿಟ್ಲ: ಕೊಳ್ನಾಡು ಗ್ರಾಮದ ಸುರಿಬೈಲು ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್ ಅವರು ನೂತನವಾಗಿ ಪ್ರಾರಂಭಿಸಲಾದ ಆಂಗ್ಲ ಮಾಧ್ಯಮ ತರಗತಿಯನ್ನು ಉದ್ಘಾಟಿಸಿ ಮಾತನಾಡಿ ಕೊಳ್ನಾಡು ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣಕ್ಕೆ ಪೂರಕವಾದ ವ್ಯವಸ್ಥೆಗಳಿವೆ. ಆಂಗ್ಲ ಮಾಧ್ಯಮದಿಂದ ಯಾವುದೇ ಸಮಸ್ಯೆಯಿಲ್ಲ. ಮಾತೃ ಭಾಷೆ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ಆಧುನಿಕ ಯುಗದಲ್ಲಿ ಅತೀ ವೇಗವಾಗಿ ಮುನ್ನಡೆಯುತ್ತಿರುವ ಸಮಾಜದೊಂದಿಗೆ ಜನರು ಮುಂದೆ ಹೋಗುವ ಅನಿವಾರ್ಯತೆ ಇದೆ ಎಂದರು.

ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಮಾತನಾಡಿ ಗ್ರಾಮದಲ್ಲಿ ಮುಚ್ಚುವ ಹಂತದಲ್ಲಿರುವ ಇತರ ಶಾಲೆಗಳಿಗೆ ಸುರಿಬೈಲು ಶಾಲೆ ಪ್ರೇರಣೆಯಾಗಿದೆ. ಈ ಶಾಲೆ ಅಭೂತಪೂರ್ವ ಯಶಸ್ಸು ಸಾಧಿಸಿದೆ. ನೀರಿನ ಯೋಜನೆಗೆ 5೦ ಸಾವಿರ ರೂ. ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ದಾನಿ ಬಶೀರ್ ಆಹ್ಮದ್ ಹಾಜಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ದೇವಿಕಾ ಆರ್ ರೈ, ಗ್ರಾಮ ಪಂಚಾಯಿತಿ ಸದಸ್ಯೆ ಜಯಂತಿ, ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎಂ ಅಬೂಬಕ್ಕರ್, ಎಂಜಿನಿಯರ್ ಶಾಫಿ, ರಫೀಕ್, ಶಾಲಾ ಮುಖ್ಯ ಶಿಕ್ಷಕ ಗೋಪಾಲ, ಅಬ್ದುಲ್ ಹಮೀದ್ ಮಂಗಳೂರು, ಎ.ಕೆ ಹಾರೀಸ್, ಸುಲೈಮಾನ್, ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *