Header Ads
Breaking News

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ನಿಯಮಗಳು ಮತ್ತಷ್ಟು ಕಠಿಣ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ ದುಬಾರಿ ದಂಡ

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸರಕಾರದ ಆದೇಶವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತಗಳು ಮುಂದಾಗಿದ್ದು, ಸೋಮವಾರದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಿಕ್ಕಿಬಿದ್ದರೆ ದುಬಾರಿ ದಂಡ ಪಾವತಿ ಮಾಡಬೇಕಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಈಗಾಗಲೇ ಈ ಬಗ್ಗೆ ಅಧಿಕೃತ ಆದೇಶ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರ ತಪಾಸಣೆ ಈಗಾಗಲೇ ಆರಂಭಗೊಂಡಿದೆ. ರಾಜ್ಯ ಸರಕಾರದ ಸೂಚನೆಯಂತೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 1,000 ರೂ.ಹಾಗೂ ಇತರ ಪ್ರದೇಶಗಳಲ್ಲಿ 500 ರೂ. ದಂಡ ವಿಧಿಸಲಾಗುತ್ತದೆ. ಸೋಂಕಿನ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ತೋರುತ್ತಿರುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಈ ಹಿಂದೆ ವಿಧಿಸಿದ 100 ರೂ. ದಂಡವನ್ನು 500 ರೂ.ಗಳಿಗೆ ಏರಿಕೆ ಮಾಡಿದೆ.

Related posts

Leave a Reply

Your email address will not be published. Required fields are marked *