Header Ads
Breaking News

ಕೋವಿಡ್-19 ವೈರಸ್ ಹರಡದಂತೆ ಮುನ್ನೆಚ್ಚರಿಕೆ : ಶುಕ್ರವಾರ 630 ಮಂದಿಯ ತಪಾಸಣೆ

ಕೋವಿಡ್ 19 ವೈರಸ್ ಹರಡದಂತೆ ತಡೆಯುವ ಸಲುವಾಗಿ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದ್ದು, ಶುಕ್ರವಾರ 630 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.1,564 ಮಂದಿ ಈಗಾಗಲೇ ಮನೆಯಲ್ಲೇ ನಿಗಾದಲ್ಲಿದ್ದಾರೆ. ಇಎಸ್‍ಐ ಆಸ್ಪತ್ರೆಯಲ್ಲಿ 14 ಮಂದಿ ನಿಗಾದಲ್ಲಿದ್ದು, ವೆನ್ಲಾಕ್ ನಲ್ಲಿ ಯಾರೂ ಇಲ್ಲ. 10 ಮಂದಿ ಈಗಾಗಲೇ 28 ದಿನಗಳ ನಿಗಾ ಅವಧಿಯನ್ನು ಪೂರೈಸಿದ್ದು, ಆರೋಗ್ಯದಲ್ಲಿ ಚೇತರಿಕೆ ಉಂಟಾಗಿದೆ. 9 ಮಂದಿಯ ಗಂಟಲು ಸ್ರಾವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಿದೆ.

17 ಮಂದಿಯ ಗಂಟಲು ಸ್ರಾವ ಪರೀಕ್ಷಾ ವರದಿ ಲಭ್ಯವಾಗಿದ್ದು, ಯಾರಲ್ಲಿಯೂ ಕೋವಿಡ್ 19 ಸೋಂಕು ಪತ್ತೆಯಾಗಿಲ್ಲ. ಜ್ವರ, ಶೀತ, ಕೆಮ್ಮು ಮುಂತಾದ ಕಾರಣಗಳಿಂದ ಶುಕ್ರವಾರ ಒಟ್ಟು 5 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ಮುಂದುವರಿದಿದ್ದು, ಬ್ಯಾಂಕ್, ಭವಿಷ್ಯನಿಧಿ ಕಚೇರಿಗಳಿಗೆ ಭೇಟಿ ನೀಡುವುದನ್ನು ಮುಂದೂಡಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಆನ್‍ಲೈನ್‍ನಲ್ಲಿ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಬ್ಯಾಂಕ್‍ಗಳು ತಮ್ಮ ಗ್ರಾಹಕರಿಗೆ ಎಸ್‍ಎಂಎಸ್ ಸಂದೇಶ ರವಾನಿಸಿ ಕೋವಿಡ್ 19 ವೈರಸ್ ಭೀತಿ ಹಿನ್ನೆಲೆಯಲ್ಲಿ ಗ್ರಾಹಕರು ಬ್ಯಾಂಕಿಗೆ ಆಗಮಿಸುವುದನ್ನು ಸ್ವಲ್ಪ ದಿನಗಳ ಕಾಲ ಆದಷ್ಟು ಕಡಿಮೆ ಮಾಡಬೇಕು. ಡಿಜಿಟಲ್ ಬ್ಯಾಂಕಿಂಗ್‍ನ್ನೇ ಹೆಚ್ಚು ಬಳಸಬೇಕು ಎಂದು ಮನವಿ ಮಾಡಿವೆ.

ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಮಾ.22ರಂದು ಜಿಲ್ಲೆಯಲ್ಲಿ ಯಾವುದೇ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸುವುದಿಲ್ಲ. ಈ ದಿನದ ಬದಲಾಗಿ ಮಾ.24ರಂದು ಎಲ್ಲ ನ್ಯಾಯಬೆಲೆ ಅಂಗಡಿಗಳು ಕಾರ್ಯಾಚರಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.ಶನಿವಾರದಿಂದಲೇ ಉಭಯ ಜಿಲ್ಲೆಗಳಲ್ಲಿ ಎಲ್ಲ ಬ್ಯೂಟಿಪಾರ್ಲರ್ ಮತ್ತು ಸೆಲೂನ್‍ಗಳು ತಾತ್ಕಾಲಿಕವಾಗಿ ಬಂದ್ ಆಗಲಿವೆ.

Related posts

Leave a Reply

Your email address will not be published. Required fields are marked *