Header Ads
Header Ads
Breaking News

ಕ್ಯಾರ್ ಚಂಡಮಾರುತದ ಪ್ರಭಾವ : ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ

ಕ್ಯಾರ್’ ಚಂಡಮಾರುತದ ಪರಿಣಾಮ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಆಳೆತ್ತರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಡಲ್ಕೊರೆತದ ಆತಂಕ ಎದುರಾಗಿದೆ.ಉಡುಪಿ ಜಿಲ್ಲೆಯಲ್ಲಿ ಮಳೆ ಅವಗಡದಿಂದ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಭಾರಿ ಮಳೆ ಕಾರಣ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ ಭಟ್ಕಳ, ಕಾರವಾರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ ಮಾಡಿದ್ದು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ. ಕುಂದಾಪುರ ತಾಲ್ಲೂಕಿನಲ್ಲಿ ಅತ್ಯಧಿಕ 8.6 ಸೆಂ.ಮಿ., ಉಡುಪಿ ತಾಲ್ಲೂಕಿನಲ್ಲಿ 8.3 ಸೆಂ.ಮೀ. ಮಳೆ ದಾಖಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಗಾಳಿಯ ಆರ್ಭಟ ಇತ್ತು, ಮೂಡಿಗೆರೆ ತಾಲ್ಲೂಕಿನ ಜಾವಳಿಯಲ್ಲಿ ವಿದ್ಯುತ್ ಕಂಬವೊಂದು ಉರುಳಿ ಮನೆಗೆ ಹಾನಿಯಾಗಿದೆ.

Related posts

Leave a Reply

Your email address will not be published. Required fields are marked *