Header Ads
Breaking News

ಖಾಸಗಿ ಶಿಕ್ಷಕರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸಲಿ : ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ಹೇಳಿಕೆ

ಕೊರೊನಾ ಸೋಂಕು ಸಂದರ್ಭದಲ್ಲಿ ಜಿಲ್ಲೆಯ ಖಾಸಗಿ ಶಿಕ್ಷಕರಿಗೆ ವೇತನವಿಲ್ಲದೇ, ತೀವ್ರ ತೊಂದರೆ ಅನುಭವಿಸಿಕೊಳ್ಳುತ್ತಿದ್ದಾರೆ ಅಂತಾ ಜಿಲ್ಲಾ ಕಾಂಗ್ರೆಸ್ ವಕ್ತಾರ ಅಭಿಷೇಕ್ ಉಳ್ಳಾಲ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರ್ಕಾರಿ ಶಿಕ್ಷಕರಿಗೆ ವೇತನ ವ್ಯವಸ್ಥೆ ಮಾಡಿದೆ. ಆದ್ರೆ ಜಿಲ್ಲೆಯಲ್ಲಿರುವ ಅನೇಕ ಖಾಸಗಿ ಶಾಲಾ ಶಿಕ್ಷಕರಿಗೆ ತೀವ್ರ ತೊಂದರೆ ಅನುಭವಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಸರ್ಕಾರ ಖಾಸಗಿ ಶಿಕ್ಷಕರಿಗೆ ವೇತನ ನೀಡಬೇಕು. ಇನ್ನು ಖಾಸಗಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಇಲ್ಲದೆ ವೇತನ ನೀಡುವುದು ಕಷ್ಟ ಸಾಧ್ಯ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕಿದೆ ಎಂದು ಅವರು ಹೇಳಿದ್ರು.

Related posts

Leave a Reply

Your email address will not be published. Required fields are marked *