
ಗಾಯಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಸ್ವತಃ ಪೊಲೀಸರೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಪುತ್ತೂರಿನ ಕೋಡಿಂಬಾಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಂಬ್ಯುಲೆನ್ಸ್ಗೆ ಕರೆ ಮಾಡಿದರೂ ತುರ್ತು ಸಮಯಕ್ಕೆ ತಲುಪದ ಹಿನ್ನಲೆ ಪುತ್ತೂರು ನಗರ ಠಾಣೆಯ ಪೋಲೀಸ್ ಸಿಬ್ಬಂದಿಗಳಾದ ಶ್ರೀ ಶೈಲ ಮತ್ತು ಬಸವರಾಜ್ ಮಾನವೀಯತೆ ಮೆರೆದು ಸ್ವತಃ ತಮ್ಮ ಜೇಬಿನ ದುಡ್ಡಿನಿಂದ ಅಟೋ ಮೂಲಕ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.