Header Ads
Header Ads
Breaking News

ಗುಂಡ್ಲುಪೇಟೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ಪ್ರಕರಣ : ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಖಂಡನೆ

ವಿಟ್ಲ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ದಲಿತ ಹಿಂದೂ ಯುವಕನ ಬೆತ್ತಲೆ ಮೆರವಣಿಗೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಹಾಗೂ ದ ಕ ಜಿಲ್ಲೆಯಲ್ಲಿ ಅಮ್ಟೂರು, ಶಂಬೂರಿನಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ದ.ಕ ಜಿಲ್ಲಾ ದಲಿತ ಸೇವಾ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದು ಸಮಿತಿ ಜಿಲ್ಲಾಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು ಹೇಳಿದರು.

ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಪ್ರಜ್ಞಾವಂತ ದಲಿತರು ಖಂಡಿಸುವ ಕಾರ್ಯ ಮಾಡದೆ ಸುಮ್ಮನಿರುವುದು ಸರಿಯಲ್ಲ. ಸ್ವಾತಂತ್ರ್ಯ ಬಂದು 70 ವರ್ಷವಾದರೂ ಸಮಾಜದಲ್ಲಿ ಸಮಾಜದಲ್ಲಿನ ವ್ಯವಸ್ಥೆ ಸರಿಯಾಗದಿರುವುದು ದುರಂತ. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಯು. ವಿಟ್ಲ, ಗೌರವ ಸಲಹೆಗಾರ ಮೋಹನ್ ದಾಸ್ ಯು. ವಿಟ್ಲ, ಸಂಘಟನಾ ಕಾರ್ಯದರ್ಶಿ ಗಣೇಶ್ ಸೀಗೆ ಬಲ್ಲೆ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *