
ಮಂಗಳೂರಿನಲ್ಲಿ ದುಷ್ಕರ್ಮಿಗಳು ಲಷ್ಕರ್ ಉಗ್ರರ ಪರ ಮತ್ತು ವಿವದಾತ್ಮಕ ಗೋಡೆ ಬರಹಗಳನ್ನು ಬರೆದ ಘೋರ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ.
ಈ ಬಗ್ಗೆ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಅವರು, ಗೋಡೆ ಬರಹದ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆಯಬೇಕು. ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ನಿರ್ಲಕ್ಷ್ಯ ತಾಳುತ್ತಿದೆ. ಪೊಲೀಸ್ ಹಾಗೂ ಸಂಘ ಪರಿವಾರ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಆರೋಪಿಗಳನ್ನು ಬಂಧನ ಮಾಡಲಾಗುತ್ತಿಲ್ಲ. ಶೀಘ್ರದಲ್ಲೇ ನೈಜ್ಯ ಆರೋಪಿಗಳನ್ನು ಬಂಧನ ಮಾಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಅನ್ವರ್ ಸಾದತ್ ಬಜತ್ತೂರು ಉಪಸ್ಥಿತರಿದ್ದರು.