Header Ads
Breaking News

ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಅವರು ಇಂದು ಬಂಟ್ವಾಳ ತಾ. ಫಜೀರು ಗೋವನಿತಾಶ್ರಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡುತ್ತಿದ್ದರು. ಗೋಶಾಲೆಗಳಿಗೆ ಹುಲ್ಲು ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳ ಕೊರತೆ ಇರುವುದು ಸರಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರು, ಹಾಸನ ಸೇರಿದಂತೆ ಹೊರ ಜಿಲ್ಲೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಹುಲ್ಲು ಉತ್ತರಿಸಲು ವಾಹನಗಳಿಗೆ ಪಾಸ್ ನೀಡುವುದು ಸೇರಿದಂತೆ ಪಶುಸಂಗೋಪನಾ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

 

ಗೋಶಾಲೆಗಳಿಗೆ ನೀರು ಸೇರಿದಂತೆ ಅಗತ್ಯ ಸಾಮಗ್ರಿಗಳ ಕೊರತೆಯಾಗದಂತೆ ಸರಕಾರ ಗಮನಹರಿಸಲಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು.ಈ ಸಂದರ್ಭದಲ್ಲಿ ಗೋಸೇವಾ ಆಯೋಗದ ಮಾಜಿ ಅಧ್ಯಕ್ಷ ಎಂ.ಬಿ. ಪುರಾಣಿಕ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಚಂದ್ರಹಾಸ ಪೂಂಜಾ, ರಾಜೇಶ್ ಶೆಟ್ಟಿ, ವಾಮನರಾಜ, ರವಿರಾಜ್, ರಮೇಶ್ ಮತ್ತಿತರರು ಇದ್ದರು.ಕೇರಳ ರಾಜ್ಯಕ್ಕೆ ಅಲ್ಪ ಸಮಧಾನ! ಹೊಸ ಪ್ರಕರಣಗಳಿಲ್ಲ-ನಾಲ್ವರು ಗುಣಮುಖ
ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ಇಲ್ಲ. ಅದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುಣಮುಖರಾಗಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 179 ಮಂದಿಗೆ ರೋಗ ಬಾಧಿಸಿದ್ದು, 171 ಮಂದಿ ಗುಣಮುಖ ರಾಗಿದ್ದಾರೆ. 8 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳ ರಾಜ್ಯದಲ್ಲಿ ಶುಕ್ರವಾರ ಕೊರೊನಾ ವೈರಸ್ ಸೋಂಕಿನ ಹೊಸ ಪ್ರಕರಣ ದಾಖಲಾಗಿಲ್ಲ. ಅದೇ ವೇಳೆ ಒಟ್ಟು 9 ಮಂದಿ ಗುಣಮುಖರಾಗಿದ್ದಾರೆ. ಕಳೆದ 55 ದಿನಗಳ ಬಳಿಕ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಬಾಧಿಸದ ದಿನವಾಗಿದ್ದು, ಸಮಾಧಾನ ಪಡುವಂತಾಗಿದೆ. ಶುಕ್ರವಾರ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಯಲ್ಲಿ ತಲಾ ನಾಲ್ವರು ಗುಣಮುಖರಾಗಿದ್ದಾರೆ. ಎರ್ನಾಕುಳಂನಲ್ಲಿ ಒಬ್ಬರು ಗುಣಮುಖರಾಗಿದ್ದಾರೆ.

Related posts

Leave a Reply

Your email address will not be published. Required fields are marked *